ETV Bharat / bharat

ರಾಮಜನ್ಮ ಭೂಮಿ ಟ್ರಸ್ಟ್‌ನಿಂದ ಅಕ್ರಮವಾಗಿ 6 ಲಕ್ಷ ರೂ. ವಿತ್​ಡ್ರಾ: ಕೇಸ್​ ದಾಖಲು - ಬ್ಯಾಂಕ್ ಆಫ್ ಬರೋಡಾ ಶಾಖೆ

ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್‌ನ ಬ್ಯಾಂಕ್ ಖಾತೆಯಿಂದ 6 ಲಕ್ಷ ರೂ.ನ್ನು ಅಕ್ರಮವಾಗಿ ವಿತ್​ಡ್ರಾ ಮಾಡಲಾಗಿದೆ. ಈ ಸಂಬಂಧ ಅಯೋಧ್ಯೆಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್‌

author img

By

Published : Sep 10, 2020, 3:46 PM IST

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್‌ನ ಬ್ಯಾಂಕ್ ಖಾತೆಯಿಂದ 6 ಲಕ್ಷ ರೂ.ನ್ನು ಅಕ್ರಮವಾಗಿ ವಿತ್​ಡ್ರಾ ಮಾಡಲಾಗಿದೆ. ಈ ಸಂಬಂಧ ಅಯೋಧ್ಯೆಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಲು ಸೈಬರ್ ತಜ್ಞರ ತಂಡ ಮುಂದಾಗಿದೆ.

ವರದಿಯ ಪ್ರಕಾರ, ಲಖನೌದ ಎರಡು ಬ್ಯಾಂಕುಗಳಿಂದ ಚೆಕ್ ಮೂಲಕ ಹಣವನ್ನು ವಿತ್​ಡ್ರಾ ಮಾಡಲಾಗಿದೆ. ಆದರೆ ಬ್ಯಾಂಕ್ ಆಫ್ ಬರೋಡಾ ಶಾಖೆಯಿಂದ 9.86 ಲಕ್ಷ ರೂ.ಗಳನ್ನು ಹಿಂಪಡೆಯಲು ವಂಚಕ ಮೂರನೇ ಪ್ರಯತ್ನ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಬ್ಯಾಂಕ್​ಗೆ ಬಂದ ವಂಚಕ ಚೆಕ್​ ನೀಡಿದ್ದು, ಈ ಕುರಿತಾಗಿ ವ್ಯವಸ್ಥಾಪಕರು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಕರೆ ಮಾಡಿ ಚೆಕ್​ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಆದರೆ ಅಂತಹ ಚೆಕ್​ಗಳ ಬಗ್ಗೆ ತಿಳಿದಿಲ್ಲವೆಂದು ನಿರಾಕರಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಿದ ಬಳಿಕ ಈ ಮೊದಲು ಸಹ ಹಣ ತೆಗೆದಿರುವುದು ಗೊತ್ತಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಪ್ಟೆಂಬರ್ 1ರಂದು 2.5 ಲಕ್ಷ ರೂ.ಗಳನ್ನು ಬ್ಯಾಂಕಿನಿಂದ ತೆಗೆಸಿಕೊಳ್ಳಲಾಗಿದೆ. ಎರಡು ದಿನಗಳ ನಂತರ 3.5 ಲಕ್ಷ ರೂ. ವಿತ್​ಡ್ರಾ ಮಾಡಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಯೋಧ್ಯ ವೃತ್ತ ಅಧಿಕಾರಿ ರಾಜೇಶ್ ಕುಮಾರ್ ರಾಯ್​ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.