ನವದೆಹಲಿ: ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ತೀವ್ರ ಅಸ್ವಸ್ಥರಾಗಿದ್ದ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಭಾನುವಾರ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ವಾಸಕೋಶ ತೊಂದರೆಯ ಜೊತೆಗೆ ಕಿಡ್ನಿ ಸಮಸ್ಯೆಯೂ ಇರುವುದರಿಂದ ಪಾಸ್ವಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ರೋಟಿನ್ ಚೆಕಪ್ ನಂತರ ಮಂಗಳವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಲೋಕ ಜನಶಕ್ತಿ ಪಕ್ಷದ ಪೋಷಕ ರಾಮ್ ವಿಲಾಸ್ ಪಾಸ್ವಾನ್ ಅವರು ಮೋದಿ ಸರ್ಕಾರದ ಹಿರಿಯ ಮಂತ್ರಿಗಳಲ್ಲಿ ಒಬ್ಬರಾಗಿದ್ದಾರೆ.