ನವದೆಹಲಿ: ಇತ್ತೀಚೆಗೆ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ನಿಧನರಾಗಿದ್ದಾರೆ.
ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಸಕ್ರಿಯ ರಾಜಕೀಯದಲ್ಲಿದ್ದ ಅವರು ದೇಶದ ಅತ್ಯಂತ ಪ್ರಸಿದ್ಧ ದಲಿತ ನಾಯಕರಲ್ಲಿ ಒಬ್ಬರಾಗಿದ್ದು, ಕಳೆದ ಕೆಲವು ವಾರಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು.
-
पापा....अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
— युवा बिहारी चिराग पासवान (@iChiragPaswan) October 8, 2020 " class="align-text-top noRightClick twitterSection" data="
Miss you Papa... pic.twitter.com/Qc9wF6Jl6Z
">पापा....अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
— युवा बिहारी चिराग पासवान (@iChiragPaswan) October 8, 2020
Miss you Papa... pic.twitter.com/Qc9wF6Jl6Zपापा....अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
— युवा बिहारी चिराग पासवान (@iChiragPaswan) October 8, 2020
Miss you Papa... pic.twitter.com/Qc9wF6Jl6Z
ಪಾಪಾ .... ಈಗ ನೀವು ಈ ಜಗತ್ತಿನಲ್ಲಿಲ್ಲ. ಆದರೆ ನೀವು ಎಲ್ಲಿದ್ದರೂ ನೀವು ಯಾವಾಗಲೂ ನನ್ನೊಂದಿಗೆ ಇರುತ್ತೀರಿ ಎಂದು ನನಗೆ ತಿಳಿದಿದೆ. ಮಿಸ್ ಯು ಪಾಪಾ ಎಂದು ಚಿರಾಗ್ ಪಾಸ್ವಾನ್ ಟ್ವೀಟ್ ಮಾಡಿದ್ದಾರೆ.
ತನ್ನ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿ, ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಕಳೆದ ವಾರ ಟ್ವೀಟ್ ಮಾಡಿದ್ದರು.
ಕಳೆದ ಹಲವು ದಿನಗಳಿಂದ ಅಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಸಂಜೆ ಕೆಲವು ಹಠಾತ್ ಬೆಳವಣಿಗೆಗಳಿಂದಾಗಿ ಅವರ ಹೃದಯದ ಸಂಬಂಧಿತ ಚಿಕಿತ್ಸೆಗೆ ತಡರಾತ್ರಿ ಕೊಡಿಸಬೇಕಾಯಿತು. ಅಗತ್ಯವಿದ್ದಲ್ಲಿ ಕೆಲವು ವಾರಗಳ ನಂತರ ಮತ್ತೊಂದು ಕಾರ್ಯಾಚರಣೆಯನ್ನು ನಡೆಸಬಹುದು. ಈ ಹೋರಾಟದ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬದವರ ಜೊತೆಗೆ ನಿಂತಿದ್ದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಪಾಸ್ವಾನ್ ನಿಧನರಾಗಿದ್ದಾರೆ.
ಪಾಸ್ವಾನ್ ಎಲ್‌ಜೆಪಿ ಪಕ್ಷದ ನಾಯಕರಾಗಿದ್ದು, ಎನ್ಡಿಎ ಜತೆ ಕೈ ಜೋಡಿಸಿ, ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.