ಡೆಹ್ರಾಡೂನ್ (ಉತ್ತರಾಖಂಡ): ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದ ಮುನ್ನ ವೀಕ್ಷಕರಿಗೆ ಮತ್ತು ಯೋಗಾಭ್ಯಾಸ ಮಾಡುವವರಿಗೆ ಮಾರ್ಗದರ್ಶನ ನೀಡಲು ಯೋಗ ಗುರು ರಾಮದೇವ್ ಹರಿದ್ವಾರದ ಹರ್ ಕಿ ಪೌರಿಯಲ್ಲಿ 'ಯೋಗ ಪ್ರೋಟೋಕಾಲ್ ರಿಹರ್ಸಲ್' ನಡೆಸಿದರು.
ಆಯುಷ್ ಸಚಿವಾಲಯವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನವನ್ನು ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ಆಚರಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಆರನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ತಮ್ಮ ಕುಟುಂಬದೊಂದಿಗೆ ಮನೆಯಲ್ಲಿ ಆಚರಿಸುವ ಮೂಲಕ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಬೇಕು ಮನವಿ ಮಾಡಿದ್ದಾರೆ.
ಯೋಗವು ನಮ್ಮ ರೋಗ ನಿರೋಧಕ ಶಕ್ತಿಯನ್ನು ಚೆನ್ನಾಗಿ ತಿಳಿದುಕೊಳ್ಳುವ ಅವಕಾಶವನ್ನು ನೀಡುತ್ತದೆ. ದೃಢ ಮನಸ್ಸು ಮತ್ತು ಆರೋಗ್ಯಕರ ದೇಹವನ್ನು ನೀಡುತ್ತದೆ ಎಂದು ಅವರು ಹೇಳಿದರು.
2020ರ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ಮೋದಿ ತಮ್ಮ ಸಂದೇಶ ನೀಡಲಿದ್ದಾರೆ. ಪ್ರಧಾನಮಂತ್ರಿಗಳ ಭಾಷಣವನ್ನು ಜೂನ್ 21 ರಂದು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುತ್ತದೆ.