ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡ ಕಾಂಗ್ರೆಸ್ ಪಕ್ಷದ ನಾಯಕರೆಲ್ಲ ಕಪಾಲಭಾತಿ ಪ್ರಾಣಾಯಾಮ ಮಾಡಿ. ಮುಖ್ಯವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಧ್ಯಾನ ಯೋಗ ಮಾಡಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಸಲಹೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಮಾತನಾಡಿರುವ ಬಾಬಾ ರಾಮ್ ದೇವ್, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 52 ಕ್ಷೇತ್ರದಲ್ಲಿ ಗೆಲುವು ಸಾಧಿಸಿರೋದು ಅವರ ಬಹುದೊಡ್ಡ ಸಾಧನೆ. ರಾಹುಲ್ ಗಾಂಧಿ ವಯನಾಡು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಪಾಲಭಾತಿ ಪ್ರಾಣಾಯಾಮದಿಂದ ದೇಹದ ಆರೋಗ್ಯ ವೃದ್ಧಿಯಾಗುವುದರ ಜೊತೆಯಲ್ಲಿ ಒತ್ತಡವನ್ನ ಕಡಿಮೆ ಮಾಡುತ್ತದೆ. ಫಲಿತಾಂಶ ಬಂದಾಗಿನಿಂದ ಕಾಂಗ್ರೆಸ್ ನಾಯಕರಲ್ಲಿ ಒತ್ತಡ ಹೆಚ್ಚಾಗಿದೆ. ಹೀಗಾಗಿ ಪ್ರಣಾಯಾಮ ಮಾಡಿದರೆ ಉತ್ತಮ ಎಂದಿದ್ದಾರೆ. ಅಮೇಠಿ ಕ್ಷೇತ್ರದಲ್ಲಿ ಸೋಲುಕಂಡಿರುವ ರಾಹುಲ್ ಗಾಂಧಿ ಧ್ಯಾನಯೋಗ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.