ರಾಮೇಶ್ವರಂ (ತಮಿಳುನಾಡು): ರಾಮೇಶ್ವರಂನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು 300 ನಿಷಿದ್ಧ ಮದ್ಯದ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಮದ್ಯದ ಬಾಟಲಿ ತುಂಬಿದ್ದ ವ್ಯಾನ್ ವಶಪಡಿಸಿಕೊಂಡಿದ್ದೇವೆ ಎಂದು ಬಂದರು ಪೊಲೀಸರು ತಿಳಿಸಿದ್ದಾರೆ.