ಚಿತ್ರಕೂಟ್ (ಮಧ್ಯಪ್ರದೇಶ): ಅತ್ಯಾಚಾರ ಸಂತ್ರಸ್ತೆಯೊಬ್ಬಳು ಮಧ್ಯಪ್ರದೇಶದ ಚಿತ್ರಕೂಟ್ನ ಮಾಣಿಕ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಖರೋದ್ ಕೆಮ್ಹಾ ಪೂರ್ವಾ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಟುಂಬದ ಇತರ ಸದಸ್ಯರು ಹೊರಗಡೆ ಹೋಗಿದ್ದಾಗ ಅಪ್ರಾಪ್ತ ಬಾಲಕಿ ತನ್ನ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾಳೆ. ಕೆಲವು ದಿನಗಳ ಹಿಂದೆ ಆಕೆ ಕೆಲವು ಯುವಕರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಳು.
ಘಟನೆಯ ಬಳಿಕ ಆಕೆ ತನ್ನ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖಾ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಆರೋಪಿಗಳನ್ನು ಬಂಧಿಸಲು ಶೋಧಕಾರ್ಯ ಆರಂಭಿಸಿದ್ದಾರೆ.
ಅಕ್ಟೋಬರ್ 8ರಂದು ಅಪ್ರಾಪ್ತ ಬಾಲಕಿ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳು ಅವಳನ್ನು ಬಲವಂತವಾಗಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು.