ETV Bharat / bharat

ಸೋದರ ಸಂಬಂಧಿಯಿಂದಲೇ ಅತ್ಯಾಚಾರ: ಅಪ್ರಾಪ್ತ ಬಾಲಕಿ ಗರ್ಭಿಣಿ!

ಬಾಲಕಿಯೊಬ್ಬಳ ಮೇಲೆ ಆಕೆಯ ಸೋದರಸಂಬಂಧಿಯೇ ಕಳೆದೊಂದು ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಗೆ ಹೊಟ್ಟೆನೋವು ಬಂದು ಆಸ್ಪತ್ರೆಗೆ ದಾಖಲಿಸಿದಾಗ, ಆಕೆ ಗರ್ಭಿಣಿ ಆಗಿರುವುದು ಕುಟುಂಬಕ್ಕೆ ತಿಳಿದಿದೆ. ರಾಜಸ್ಥಾನದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

rape
rape
author img

By

Published : Jun 9, 2020, 12:25 PM IST

Updated : Jun 9, 2020, 12:30 PM IST

ಜೈಪುರ (ರಾಜಸ್ಥಾನ): ಸವಾಯಿ ಮಾಧೋಪುರದ ಬೊನ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳ ಮೇಲೆ ಆಕೆಯ ಸೋದರ ಸಂಬಂಧಿಯೇ ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ಹೊಟ್ಟೆನೋವು ಬಂದು ಆಸ್ಪತ್ರೆಗೆ ದಾಖಲಿಸಿದಾಗ, ಆಕೆ ಗರ್ಭಿಣಿ ಎಂಬುದು ಕುಟುಂಬಕ್ಕೆ ತಿಳಿದಾಗ ಈ ಘಟನೆ ಬೆಳಕಿಗೆ ಬಂದಿದೆ.

"ಹೆತ್ತವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಬಾಲಕಿ ತನ್ನ ಸೋದರ ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿ ಬಳಿಕ ಗರ್ಭಿಣಿಯಾಗಿದ್ದಳು. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದನು" ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಾಲಕಿಯ ಪೋಷಕರು ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Last Updated : Jun 9, 2020, 12:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.