ETV Bharat / bharat

ರೆಪೋ ದರ ಕಡಿತ, ಇಎಂಐ ಪಾವತಿಗೆ ಮತ್ತೆ ಮೂರು ತಿಂಗಳು ಅವಕಾಶ: ಆರ್​ಬಿಐ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು 40 ಬೇಸಿಸ್ ಪಾಯಿಂಟ್‌ಗಳಿಂದ 4.4ರಿಂದ ಶೇ. 4ಕ್ಕೆ ಇಳಿಸಲಾಗಿದೆ ಎಂದು ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್ ಹೇಳಿದ್ದಾರೆ.

RBI Governor Shaktikanta Das
ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್
author img

By

Published : May 22, 2020, 11:05 AM IST

ಮುಂಬೈ: ಆರ್ಥಿಕತೆಯ ಉತ್ತೇಜನದ ಪ್ರಯತ್ನವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು 40 ಬೇಸಿಸ್ ಪಾಯಿಂಟ್‌ಗಳಿಂದ 4.4ರಿಂದ ಶೇ. 4ಕ್ಕೆ ಇಳಿಸಿದೆ.

  • The repo rate cut by 40 basis points from 4.4 % to 4%. Reverse repo rate stands reduced to 3.35%: Reserve Bank of India (RBI) Governor Shaktikanta Das pic.twitter.com/z9N8fr7vRT

    — ANI (@ANI) May 22, 2020 " class="align-text-top noRightClick twitterSection" data=" ">

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್, ರೆಪೋ ದರವನ್ನು 40 ಬೇಸಿಸ್ ಪಾಯಿಂಟ್‌ಗಳಿಂದ ಶೇ. 4ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಇದರಿಂದ ರಿವರ್ಸ್ ರೆಪೋ ದರವು ಶೇಕಡಾ 3.35 ರಷ್ಟಿರಲಿದೆ ಎಂದು ಹೇಳಿದ್ದಾರೆ. ಆರು ಸದಸ್ಯರ ಹಣಕಾಸು ನೀತಿ ಸಮಿತಿ (ಎಂಪಿಸಿ) ಈ ನಿರ್ಧಾರದ ಪರವಾಗಿ 5:1ರಷ್ಟು ಮತ ಚಲಾಯಿಸಿದೆ ಎಂದು ಹೇಳಿದ್ದಾರೆ.

ರೆಪೋ ದರ ಎಂದರೆ ರಿಸರ್ವ್ ಬ್ಯಾಂಕ್ ದೇಶದ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ರಿವರ್ಸ್ ರೆಪೋ ದರ ಎಂದರೆ ವಾಣಿಜ್ಯ ಬ್ಯಾಂಕುಗಳು ಆರ್​ಬಿಐನಲ್ಲಿ ಠೇವಣಿ ಇಡುವ ಹಣಕ್ಕೆ ಆರ್​ಬಿಐ ಕೊಡುವ ಬಡ್ಡಿಯ ದರವಾಗಿದೆ.

  • Three-month moratorium we allowed on term loans&working capitals we allowed certain relaxations. In view of the extension of the lockdown&continuing disruption on account of #COVID19, these measures are being further extended by another 3 months from June 1 to Aug 31: RBI Guv pic.twitter.com/YKulKb9bD0

ದೇಶದ ಆರ್ಥಿಕ ಸ್ಥಿತಿ ನಿರೀಕ್ಷೆ ಮೀರಿ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಕ್ಷೇತ್ರ ಮಾತ್ರ ಆಶಾದಾಯಕವಾಗಿದೆ ಎಂದಿದ್ದಾರೆ. ಕಚ್ಛಾ ತೈಲದ ಬೆಲೆ ಕಡಿಮೆಯಾಗಿರುವುದು ಆದಾಯ ಹರಿವಿನ ಮೇಲೆ ಪರಿಣಾಮ ಬೀರಿದೆ. ಹಣದುಬ್ಬರ ಪ್ರಮಾಣವು ಹೆಚ್ಚಿದೆ ಎಂದು ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಲಾಕ್​ಡ್​ನಿಂದಾಗಿ ಇಎಂಐ ಪಾವತಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿತ್ತು. ದೇಶದಾದ್ಯಂತ ಲಾಕ್​ಡೌನ್​ ವಿಸ್ತರಣೆಯಾದ ಪರಿಣಾಮ ಇಎಂಐ ಪಾವತಿಗೆ ಮತ್ತೆ ಮೂರು ತಿಂಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.