ETV Bharat / bharat

ರಾಜಧಾನಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣ ಇಳಿಕೆ: ಡಿಸಿಡಬ್ಲ್ಯು ಮಾಹಿತಿ - ದೆಹಲಿ ಮಹಿಳಾ ಆಯೋಗ ಮಾಹಿತಿ

ಲಾಕ್​​​ಡೌನ್​ ಅವಧಿಯಲ್ಲಿ ಆಹಾರ, ಅಂತಾರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟ ಸುಮಾರು 20 ಸಾವಿರ ಕರೆಗಳನ್ನು ಸ್ವೀಕರಿಸಿ, ದೂರುದಾರರಿಗೆ ಸಹಾಯ ಮಾಡಿದ್ದೇವೆ ಎಂದು ದೆಹಲಿ ಮಹಿಳಾ ಆಯೋಗ ಹೇಳಿದೆ.

Delhi Commission for Women
ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್
author img

By

Published : Jun 30, 2020, 9:08 AM IST

ನವದೆಹಲಿ : ಲಾಕ್​​​​ಡೌನ್ ಅವಧಿಯಲ್ಲಿ 181 ಸಹಾಯವಾಣಿಗಳ ಮೂಲಕ 34,454 ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಸ್ವೀಕರಿಸಿದ್ದು, ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದೆ ಎಂದು ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿದ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್, ಲಾಕ್​​​ಡೌನ್​ ಅವಧಿಯಲ್ಲಿ ಆಹಾರ, ಅಂತಾರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟ ಸುಮಾರು 20 ಸಾವಿರ ಕರೆಗಳನ್ನು ಸ್ವೀಕರಿಸಿ, ದೂರುದಾರರಿಗೆ ಸಹಾಯ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಲಾಕ್​​​​​​ಡೌನ್​ ಆರಂಭದ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹಲವಾರು ಪಟ್ಟು ಕಡಿಮೆಯಾಗಿದೆ. ಆಯೋಗ ಮತ್ತು ಸರ್ಕಾರ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ. ಮಹಿಳೆಯರು ಮತ್ತು ಹುಡುಗಿಯರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ವರದಿ ಮಾಡಲು ಪ್ರೋತ್ಸಾಹಿಸಿದೆ ಎಂದಿದ್ದಾರೆ.

ಕಳೆದ ವರ್ಷ ಈ ಅವಧಿಯಲ್ಲಿ ದಾಖಲಾದ ದೂರುಗಳಿಗೆ ಹೋಲಿಸಿದರೆ, ಈ ವರ್ಷ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. 2019 ಮಾರ್ಚ್​ನಿಂದ ಜೂನ್​ವರೆಗೆ 8,188 ಕೌಟುಂಬಿಕ ಹಿಂಸೆಯ ದೂರು ದಾಖಲಾಗಿತ್ತು. ಆದರೆ, ಈ ವರ್ಷ ಅದೇ ಅವಧಿಯಲ್ಲಿ 6,909 ದೂರುಗಳು ದಾಖಲಾಗಿದೆ. ಇದು ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಆಗಿರುವ ಇಳಿಕೆಯನ್ನು ತೋರಿಸುತ್ತದೆ. ಆದರೆ, ಲಾಕ್​​​​ಡೌನ್ ಬಳಿಕ ಜನರು ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಮತ್ತೆ ಕೌಟುಂಬಿಕ ಹಿಂಸೆ ಮತ್ತು ಇತರ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿವೆ ಎಂದು ಆಯೋಗ ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.