ETV Bharat / bharat

ಕೊರೊನಾ ನಿವಾರಣೆಗೆ ಹನುಮಾನ್ ಚಾಲೀಸಾ ಪಠಿಸಬೇಕು: ಪ್ರಜ್ಞಾ ಸಿಂಗ್ ಠಾಕೂರ್ - ಪ್ರಜ್ಞಾ ಸಿಂಗ್ ಠಾಕೂರ್ ಟ್ವೀಟ್

ದಿನಕ್ಕೆ ಐದು ಬಾರಿ ಹನುಮಾನ್ ಚಾಲೀಸಾ ಪಠಣ ಮಾಡಬೇಕು. ಇದರಿಂದಾಗಿ ಕೊರೊನಾ ಸೋಂಕನ್ನು ನಿಯಂತ್ರಿಸಬಹುದು ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮನವಿ ಮಾಡಿದ್ದಾರೆ.

ಪ್ರಜ್ಞಾ ಸಿಂಗ್ ಠಾಕೂರ್
ಪ್ರಜ್ಞಾ ಸಿಂಗ್ ಠಾಕೂರ್
author img

By

Published : Jul 26, 2020, 2:09 PM IST

ಭೋಪಾಲ್(ಮಧ್ಯೆ ಪ್ರದೇಶ): ಕೊರೊನಾ ವೈರಸ್ ರೋಗವನ್ನು ತೊಡೆದು ಹಾಕಲು ಪ್ರತಿಯೊಬ್ಬರು ದಿನಕ್ಕೆ ಐದು ಬಾರಿ ಹನುಮಾನ್ ಚಾಲೀಸಾವನ್ನು ಪಠಿಸಬೇಕು ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮನವಿ ಮಾಡಿದ್ದಾರೆ.

ಆಗಸ್ಟ್ 5 ರಂದು ರಾಮ ಮಂದಿರ ದೇವಾಲಯದ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡುವ ಮೂಲಕ ಮನವಿ ಮಾಡಿರುವ ಅವರು, ನಾವೆಲ್ಲರೂ ಒಗ್ಗಟ್ಟಾಗಿ ಆಧ್ಯಾತ್ಮಿಕದ ಮೂಲಕ ಮಾರಣಾಂತಿಕ ಕೊರೊನಾ ವೈರಸ್ ಅನ್ನು ನಿಯಂತ್ರಿಸಲು ಪ್ರಯತ್ನಿಸೋಣ. ದೇಶಾದ್ಯಂತ ಹಿಂದೂಗಳು 'ಹನುಮಾನ್ ಚಾಲೀಸಾ'ವನ್ನು ಒಂದೇ ಧ್ವನಿಯಲ್ಲಿ ಪಠಿಸಿದರೆ ಖಂಡಿತವಾಗಿಯೂ ಅದು ಕೆಲಸ ಮಾಡುತ್ತದೆ. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಬಯಸೋಣ. ಹೀಗಾಗಿ ಜುಲೈ 25 ರಿಂದ ಆಗಸ್ಟ್ 05 ರವರೆಗೆ ಎಲ್ಲರೂ ತಮ್ಮ ಮನೆಗಳಲ್ಲಿ ದಿನಕ್ಕೆ ಐದು ಬಾರಿ ಹನುಮಾನ್ ಚಾಲೀಸಾ ಪಠಿಸಿ ಎಂದು ಟ್ವೀಟ್ ಮಾಡಿದ್ದಾರೆ.

  • आइए हम सब मिलकर कोरोना महामारी को समाप्त करने के लिए लोगों के अच्छे स्वास्थ्य की कामना के लिए एक आध्यात्मिक प्रयास करें आज25 से 5 अगस्त तक प्रतिदिन शाम 7:00 बजे अपने घरों में हनुमान चालीसा का 5 बार पाठकरें5 अगस्त को अनुष्ठान का रामलला की आरती के साथ घरों में दीप जलाकर समापन करें pic.twitter.com/Ba0J2KrkA8

    — Sadhvi Pragya singh thakur (@SadhviPragya_MP) July 25, 2020 " class="align-text-top noRightClick twitterSection" data=" ">

ಆಗಸ್ಟ್ 05 ರಂದು ಮನೆಯಲ್ಲೇ ದೀಪಗಳನ್ನು ಬೆಳಗಿಸಿ ರಾಮನಿಗೆ ಆರತಿ ಅರ್ಪಿಸುವ ಮೂಲಕ ನಿಮ್ಮ ಆಚರಣೆಯನ್ನು ಮುಕ್ತಾಯಗೊಳಿಸಿ ಎಂದು ಹೇಳಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಆಗಸ್ಟ್ 4 ರವರೆಗೆ ಭೋಪಾಲ್‌ನಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ್ದು, ಈ ಮೂಲಕ ಬಿಜೆಪಿ ಸರ್ಕಾರ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಪ್ರಜ್ಞಾ ಸಿಂಗ್​ ಠಾಕೂರ್​ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.