ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆತಿದೆ. ಮಸೂದೆ ಪರವಾಗಿ 293 ಸದಸ್ಯರು ಮತ ಹಾಕಿದರೆ, 82 ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ನೀಡುವ ಉದ್ದೇಶವೇ ಇದಾಗಿದೆ. ಸೋಮವಾರ ಬೆಳಗ್ಗೆ ಸದನದಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಸೂದೆ ಮಂಡಿಸಿದರು. ಇದಕ್ಕೆ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದವು. ಈ ನಡುವೆಯೇ ಮಸೂದೆಯನ್ನು ಚರ್ಚೆಗೆ ಒಳಪಡಿಸಲಾಯಿತು.
-
Lok Sabha: 293 'Ayes' in favour of introduction of #CitizenshipAmendmentBill and 82 'Noes' against the Bill's introduction, in Lok Sabha pic.twitter.com/z1SbYJbvcz
— ANI (@ANI) December 9, 2019 " class="align-text-top noRightClick twitterSection" data="
">Lok Sabha: 293 'Ayes' in favour of introduction of #CitizenshipAmendmentBill and 82 'Noes' against the Bill's introduction, in Lok Sabha pic.twitter.com/z1SbYJbvcz
— ANI (@ANI) December 9, 2019Lok Sabha: 293 'Ayes' in favour of introduction of #CitizenshipAmendmentBill and 82 'Noes' against the Bill's introduction, in Lok Sabha pic.twitter.com/z1SbYJbvcz
— ANI (@ANI) December 9, 2019
ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದು ಸಂವಿಧಾನದ ಉಲ್ಲಂಘನೆ ಎಂಬುದಾಗಿ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಆದರೆ, ಅಮಿತ್ ಶಾ ಮಸೂದೆಯನ್ನು ಸಮರ್ಥಿಸಿಕೊಂಡರು. ಸದ್ಯ ಮಸೂದೆಗೆ ರಾಷ್ಟ್ರಪತಿ ಅಂಕಿತ ಬಿದ್ದಿದೆ.
ಏನಿದು ಮಸೂದೆ ತಿದ್ದುಪಡಿ?
ಆರು ದಶಕಗಳಷ್ಟು ಹಳೆಯದಾದ ಪೌರತ್ವ ಕಾಯ್ದೆಗೆ ತಿದ್ದುಪಡಿಗಳನ್ನು ತರಲು ಉದ್ದೇಶಿಸಿರುವ ಈ ಮಸೂದೆಯಡಿ 2014, ಡಿಸೆಂಬರ್ 31 ಮತ್ತು ಅದಕ್ಕೂ ಮುನ್ನ ಕಿರುಕುಳಗಳಿಂದಾಗಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳಿಂದ ಬಂದಿರುವ ಹಿಂದು, ಸಿಖ್, ಬೌದ್ಧ, ಜೈನ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ನಿರಾಶ್ರಿತರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುವುದಿಲ್ಲ ಮತ್ತು ದೇಶದಲ್ಲಿ ಐದು ವರ್ಷ ವಾಸವಾದ ಬಳಿಕ ಅವರಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ.