ETV Bharat / bharat

ಭಾರೀ ಮಳೆಗೆ ತತ್ತರಿಸಿದ ತೆಲಂಗಾಣ; ಭರದಿಂದ ಸಾಗಿದೆ ರಕ್ಷಣಾ ಕಾರ್ಯ - ಹೈದರಾಬಾದ್ ಪರಿಹಾರ ಕಾರ್ಯಗಳು

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಪ್ರದೇಶ ಮತ್ತು ಸುತ್ತಮುತ್ತ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ನಷ್ಟವಾಗಿದೆ.

telangana
ತೆಲಂಗಾಣ
author img

By

Published : Oct 15, 2020, 4:12 PM IST

ಹೈದರಾಬಾದ್ (ತೆಲಂಗಾಣ): ಮೊನ್ನೆ ಸುರಿದ ಭಾರೀ ಮಳೆಗೆ ಹೈದರಾಬಾದ್​ ಸೇರಿದಂತೆ ತೆಲಂಗಾಣದ ಹಲವು ಪ್ರದೇಶಗಳು ಅಪಾರ ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಇತರ ಸ್ಥಳಗಳಲ್ಲಿ ಪರಿಹಾರ ಕಾರ್ಯಗಳು ಭರದಿಂದ ಸಾಗುತ್ತಿವೆ.

ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮಂತ್ರಿಗಳು ಮತ್ತು ಅಧಿಕಾರಿಗಳೊಂದಿಗೆ ಇಂದು ಮಳೆ ಪರಿಹಾರ ಕ್ರಮಗಳ ಕುರಿತು ಸಭೆ ನಡೆಸಲಿದ್ದಾರೆ. ಈ ಕುರಿತಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಮಾತನಾಡಿ, ಅತೀ ಹೆಚ್ಚಿನ ನೀರು ನಿಲುಗಡೆಯಾದ ಸ್ಥಳಗಳಿಂದ ನೀರನ್ನು ಹೊರಹಾಕಲು, ಅಲ್ಲಿನ ನಾಗರಿಕರಿಗೆ ಸಹಾಯ ಮಾಡಲು ಹಾಗೂ ಆ ಪ್ರದೇಶಗಳಲ್ಲಿ ಸಂಚಾರವನ್ನು ಪುನಃಸ್ಥಾಪಿಸಲು ಪರಿಹಾರ ತಂಡಗಳು ಸತತವಾಗಿ ಕೆಲಸ ಮಾಡುತ್ತಿವೆ. ಅಲ್ಲದೆ 61 ಪರಿಹಾರ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅಗತ್ಯವಿರುವ ಕಡೆಗಳಲ್ಲಿ ಹೆಚ್ಚಿನ ತಂಡ ಸೇರಿಸಿ ಪರಿಹಾರ ಕಾರ್ಯ ಮುಂದುವರಿಸಿವೆ ಎಂದರು.

ನೆರೆ ಪೀಡಿತ ಪ್ರದೇಶಗಳಲ್ಲಿ ಸುಮಾರು 1.5 ಲಕ್ಷ ಆಹಾರ ಪ್ಯಾಕೆಟ್‌ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ನೀರು ಸ್ಥಗಿತಗೊಂಡಿರುವ ನಗರ ಪ್ರದೇಶಗಳಲ್ಲಿ ಅನ್ನಪೂರ್ಣ ಸಬ್ಸಿಡಿ ಹೊಂದಿರುವ ಆಹಾರ ಕ್ಯಾಂಟೀನ್‌ಗಳನ್ನು ತೆರೆಯಲಾಗಿದೆ. ಅಲ್ಲದೆ ಈ ಪರಿಹಾರ ಶಿಬಿರಗಳು ಒಂದೆರಡು ದಿನಗಳವರೆಗೆ ಮುಂದುವರಿಯಲಿವೆ ಎಂದು ಹೇಳಿದರು.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಪ್ರದೇಶ ಮತ್ತು ಸುತ್ತಮುತ್ತ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ನಷ್ಟವಾಗಿದೆ. ಪ್ರಾಣ ಹಾನಿ ಹಾಗೂ ಆಸ್ತಿಯ ನಷ್ಟವನ್ನು ನಿಯಂತ್ರಿಸುವಲ್ಲಿ ಸರ್ಕಾರಿ ಸಂಸ್ಥೆಗಳು ಯಶಸ್ವಿಯಾಗಿವೆ ಎಂದರು.

ಇನ್ನು ಆಯಾ ಇಲಾಖೆಗಳಲ್ಲಿ ಆಗಿರುವ ನಷ್ಟಕ್ಕೆ ಸಂಬಂಧಿಸಿದ ವಿವರಗಳೊಂದಿಗೆ ಇಂದಿನ ಸಭೆಗೆ ಬರುವಂತೆ ಅಧಿಕಾರಿಗಳಿಗೆ ಸಿಎಂ ಕಡ್ಡಾಯ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಪುನರ್ವಸತಿ ಕ್ರಮಗಳು, ತೆಗೆದುಕೊಳ್ಳಬೇಕಾದ ಹೆಚ್ಚುವರಿ ಕ್ರಮಗಳು ಮತ್ತು ಕೇಂದ್ರಕ್ಕೆ ಸಲ್ಲಿಸಬೇಕಾದ ವರದಿಯಲ್ಲಿ ಉಲ್ಲೇಖಿಸಬೇಕಾದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಾರಂಗಲ್‌ ಜಿಲ್ಲೆಯಲ್ಲಿ ಮಳೆ ಪರಿಹಾರ ಕ್ರಮಗಳ ಕುರಿತು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸತ್ಯವತಿ ರಾಥೋಡ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.