ನವದೆಹಲಿ: ಟೀಂ ಇಂಡಿಯಾ ಸದ್ಯ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿದ್ದು, 5 ಟಿ-20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈಗಾಗಲೆ ಎರಡು ಟಿ-20 ಪಂದ್ಯಗಳನ್ನಾಡಿದ್ದು, ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎರಡು ಪಂದ್ಯಗಳನ್ನು ಸುಲಭವಾಗಿ ಗೆದ್ದುಕೊಂಡಿದೆ.
ನಾಳೆ ಹ್ಯಾಮಿಲ್ಟನ್‌ನ ಸೆಡಾನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟಿ-20 ಪಂದ್ಯದಲ್ಲಿ ಭಾರತಿಯ ಮೂವರು ಆಟಗಾರರು ಹೊಸ ದಾಖಲೆ ಬರೆಯಲು ರೆಡಿಯಾಗಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೇವಲ 48 ರನ್ ಗಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ನ ಆರಂಭಿಕ ಬ್ಯಾಟ್ಸ್ಮನ್ ಆಗಿ 10,000 ರನ್ಗಳ ಗಡಿ ಮುಟ್ಟಲಿದ್ದಾರೆ. ರೋಹಿತ್ ಆರಂಭಿಕನಾಗಿ ಈಗಾಗಲೇ ಒಟ್ಟು 9,952 ರನ್ ಕಲೆ ಹಾಕಿದ್ದಾರೆ.
ನಾಳಿನ ಪಂದ್ಯದಲ್ಲಿ ಏನಾದರೂ 48 ರನ್ಗಳಿಸಿದರೆ, ಮಾಜಿ ಬ್ಯಾಟಿಂಗ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ಸುನಿಲ್ ಗವಾಸ್ಕರ್ ಅವರ ಪಟ್ಟಿಗೆ ಹಿಟ್ಮ್ಯಾನ್ ರೋಹಿತ್ ಶರ್ಮಾ ಕೂಡ ಸೇರಲಿದ್ದಾರೆ.
ಇದಲ್ಲದೇ 96 ರನ್ ಗಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 14,000 ರನ್ ಗಳಿಸಿದ 8ನೇ ಭಾರತೀಯ ಬ್ಯಾಟ್ಸ್ಮನ್ ಎಂಬ ದಾಖಲೆಗೂ ರೋಹಿತ್ ಪಾತ್ರರಾಗಲಿದ್ದಾರೆ.