ETV Bharat / bharat

ಇತ್ತ ಸರ್ಕಾರ ರಚಿಸಲು ಎನ್​ಡಿಎ ಸಜ್ಜು... ಅತ್ತ ಕಾಂಗ್ರೆಸ್​ನಲ್ಲಿ ಒಳಜಗಳ! - ನಿತೀಶ್​ ಕುಮಾರ್ ರಾಜೀನಾಮೆ

ನೂತನ ಕಾಂಗ್ರೆಸ್ ಶಾಸಕರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವೇಳೆ ಕೈ ಕೈ ಮಿಲಾಯಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮತ್ತೊಂದೆಡೆ ಹೊಸ ಸರ್ಕಾರ ರಚಿಸಲು ನಿತೀಶ್ ಕುಮಾರ್​​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

nitish kumar
ನಿತೀಶ್ ಕುಮಾರ್​
author img

By

Published : Nov 13, 2020, 7:57 PM IST

ಪಾಟ್ನಾ (ಬಿಹಾರ): ವಿಧಾನಸಭಾ ಚುನಾವಣೆ ನಡೆದ ಬಳಿಕ ಬಿಹಾರ ಕಾಂಗ್ರೆಸ್​ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಇಬ್ಬರು ಶಾಸಕರ ಬೆಂಬಲಿಗರು ಪಕ್ಷದ ಶಾಸಕಾಂಗ ಸಭೆಯಲ್ಲಿ ಕೈ ಕೈ ಮಿಲಾಯಿಸಿದ್ದಾರೆ ಎಂದು ವರದಿಯಾಗಿದೆ.

ಈ ಬಾರಿಯ ಚುನಾವಣೆಯಲ್ಲಿ 19 ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು, 17 ಶಾಸಕರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಪಾಟ್ನಾದ ಸದಾಖತ್ ಆಶ್ರಮದಲ್ಲಿ ಸಭೆ ಸೇರಿದ್ದರು.

ಈ ವೇಳೆ ಬಿಕ್ರಮ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸಿದ್ಧಾರ್ಥ್ ಸಿಂಗ್ ಬೆಂಬಲಿಗರು ಹಾಗೂ ಮಾಜಿ ಸಚಿವ-ಮಹಾರಾಜಗಂಜ್​​ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಜಯ್ ಶಂಕರ್ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ್ದಾರೆ. ಬೇರೆ ನಾಯಕರ ವಿರುದ್ಧ ಘೋಷಣೆಯನ್ನು ಪರಸ್ಪರ ಕೂಗಿಕೊಂಡು ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.

ಉಭಯ ನಾಯಕರ ಬೆಂಬಲಿಗರಿಬ್ಬರೂ ತಮ್ಮ ನಾಯಕನಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ್ದಾರೆ. ಹಿರಿಯ ನಾಯಕರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬಿಹಾರ ಸಿಎಂ ನಿತೀಶ್​ ಕುಮಾರ್ ರಾಜೀನಾಮೆ ಸಲ್ಲಿಕೆ

ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ ಎನ್​ಡಿಎ ತಮ್ಮ ಮುಖ್ಯಮಂತ್ರಿಯನ್ನು ಘೋಷಿಸಿದ ಎರಡು ದಿನಗಳ ನಂತರ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಫಗು ಚೌಹಾಣ್​ಗೆ ರಾಜೀನಾಮೆ ಸಲ್ಲಿಸಿದ್ದು, ಹೊಸ ಸರ್ಕಾರ ರಚನೆಗೆ ಕಸರತ್ತು ಪ್ರಾರಂಭಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.