ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಹಾಗೂ ತೀವ್ರ ಅನಾರೋಗ್ಯದ ಕಾರಣ ಚೆನ್ನೈನ ಖಾಸಗಿ ಅಸ್ಪತ್ರೆಯಲ್ಲಿ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿರುವ ಅವರಿಗೆ ವೆಂಟಿಲೇಟರ್ನಲ್ಲೇ ವೈದ್ಯಕೀಯ ಚಿಕಿತ್ಸೆ ನಡೆಯುತ್ತಿದ್ದು, ಇದೀಗ ಅವರ ಆರೋಗ್ಯದ ಬಗ್ಗೆ ಮಗ ಎಸ್.ಪಿ ಚರಣ್ ಮಾಹಿತಿ ಹಂಚಿಕೊಂಡಿದ್ದಾರೆ.
-
Veteran playback singer #SPBalasubramaniam, who is under treatment for #COVID19, is stable, says, his son SP Charan. pic.twitter.com/2PgucRpzEk
— All India Radio News (@airnewsalerts) September 3, 2020 " class="align-text-top noRightClick twitterSection" data="
">Veteran playback singer #SPBalasubramaniam, who is under treatment for #COVID19, is stable, says, his son SP Charan. pic.twitter.com/2PgucRpzEk
— All India Radio News (@airnewsalerts) September 3, 2020Veteran playback singer #SPBalasubramaniam, who is under treatment for #COVID19, is stable, says, his son SP Charan. pic.twitter.com/2PgucRpzEk
— All India Radio News (@airnewsalerts) September 3, 2020
ಆಗಸ್ಟ್ 5ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಎಸ್ಪಿಬಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ಚರಣ್ ತಿಳಿಸಿದ್ದಾರೆ. ವಿಡಿಯೋ ಶೇರ್ ಮಾಡಿರುವ ಎಸ್ಪಿಬಿ ಮಗ ಚರಣ್, ಸೋಮವಾರದ ವೇಳೆಗೆ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ. ಈ ಮೂಲಕ ತಂದೆಯ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಾಣಿಸಿಕೊಂಡಿರುವ ಮಾಹಿತಿ ನೀಡಿದ್ದಾರೆ.
ಅಪ್ಪ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ....ಎಸ್ಪಿಬಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪುತ್ರ
ಕಳೆದ ನಾಲ್ಕು ದಿನಗಳಿಂದ ತಂದೆಯ ಆರೋಗ್ಯದಲ್ಲಿ ಸ್ಥಿರತೆ ಇದ್ದು, ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ. ತಂದೆ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಳ್ಳಲು ಪ್ರಾರ್ಥನೆ ಮಾಡಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿರುವ ಚರಣ್, ಸೋಮವಾರದ ವೇಳೆಗೆ ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬರುವ ಮುನ್ಸೂಚನೆ ನೀಡಿದ್ದಾರೆ.
ಕನ್ನಡ, ಹಿಂದಿ, ತಮಿಳು ಸೇರಿದಂತೆ ಅನೇಕ ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಹಾಡು ಹಾಡಿರುವ ಎಸ್ಪಿಬಿ ರಾಷ್ಟ್ರೀಯ ಫಿಲಂ ಅವಾರ್ಡ್, ಪದ್ಮಶ್ರೀ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪಡೆದುಕೊಂಡಿದ್ದಾರೆ.