ETV Bharat / bharat

ಶಶಿಕಲಾಗೆ ಸೇರಿದ್ದ 2,000 ಕೋಟಿ ರೂ. ಆಸ್ತಿ ಮುಟ್ಟುಗೋಲು

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾಗೆ ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ಶಾಕ್ ನೀಡಿದೆ.

Saiskala
Saiskala
author img

By

Published : Oct 7, 2020, 4:58 PM IST

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಹಾಯಕಿ ಶಶಿಕಲಾ ಅವರಿಗೆ ಸೇರಿದ್ದ 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆಯು ಮುಟ್ಟುಗೋಲು ಹಾಕಿಕೊಂಡಿದೆ.

ತಮಿಳುನಾಡಿನ ಕೊಡನಾಡ್ ಹಾಗೂ ಸಿರುಥಾವೂರ್​ ಪ್ರದೇಶಗಳಲ್ಲಿನ ಆಸ್ತಿ ಇದಾಗಿದೆ ಎಂದು ತಿಳಿದು ಬಂದಿದೆ. ​​ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಈಗಾಗಲೇ 2017ರಿಂದಲೂ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಶಶಿಕಲಾ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೊಳಗಾಗಿದ್ದಾರೆ.

  • Income Tax Department today attached assets belonging to former CM J Jayalalithaa's aide Sasikala in Kodanad and Siruthavur areas of Tamil Nadu. Assets worth Rs 2000 crore frozen: Income Tax Department pic.twitter.com/WPmT0cBeVV

    — ANI (@ANI) October 7, 2020 " class="align-text-top noRightClick twitterSection" data=" ">

2017ರ ನವೆಂಬರ್​ ನಲ್ಲಿ ಆದಾಯ ತೆರಿಗೆ ಇಲಾಖೆ ಇವರ ನಿವಾಸದ ಮೇಲೆ ದಾಳಿ ನಡೆಸಿ ಬರೋಬ್ಬರಿ 16 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಮಾಡಿಕೊಂಡಿತ್ತು. ದೇಶದಲ್ಲಿ ನೋಟ್​ ಬ್ಯಾನ್​ ಆದ ಬಳಿಕ ಶಶಿಕಲಾ ಒಟ್ಟು 9 ಆಸ್ತಿಗಳನ್ನು ಖರೀದಿ ಮಾಡಿದ್ದರು ಎಂದು ತಿಳಿದು ಬಂದಿತ್ತು. ಹೀಗಾಗಿ 150 ಸ್ಥಳಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆ ಹಾಗೂ ಅಪಾರ ಪ್ರಮಾಣದ ಅಕ್ರಮ ಆಸ್ತಿ ವಶಕ್ಕೆ ಪಡೆದುಕೊಂಡಿತು. ಜತೆಗೆ ಬೇನಾಮಿ ಆಸ್ತಿ ವಹಿವಾಟು ಆ್ಯಕ್ಟ್​ ಅಡಿ ಅವರ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.