ETV Bharat / bharat

ಭಾರತದ ಭೂಪ್ರದೇಶಕ್ಕೆ ಚೀನಾ ನುಸುಳಿದೆ.. ಸ್ಯಾಟ್​ಲೈಟ್​ ಚಿತ್ರ ತೋರಿಸಿ ರಾಹುಲ್ ಕಿಡಿ

ಚೀನಾ, ಭಾರತದ ಭೂಪ್ರದೇಶಕ್ಕೆ ನುಸುಳಿದೆ ಎಂಬುದನ್ನು ಉಪಗ್ರಹ ಚಿತ್ರಗಳು ತೋರಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದಾರೆ.

atellite images show China has intruded into India
ಭಾರತದ ಭೂಪ್ರದೇಶಕ್ಕೆ ಚೀನಾ ನುಸುಳಿದೆ
author img

By

Published : Jun 21, 2020, 9:26 PM IST

ನವದೆಹಲಿ: ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಚೀನಾ ಜೊತೆಗಿನ ಉದ್ವಿಗ್ನತೆಯ ನಡುವೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್​ ಮೂಲಕ ಮತ್ತೆ ಪ್ರಧಾನಿ ಮೋದಿ ಅವರನ್ನು ತಿವಿದಿದ್ದು, ಚೀನಾ, ಭಾರತದ ಭೂಪ್ರದೇಶಕ್ಕೆ ನುಸುಳಿದೆ ಎಂದು ಉಪಗ್ರಹ ಚಿತ್ರಗಳು ತೋರಿಸುತ್ತವೆ ಎಂದಿದ್ದಾರೆ.

ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ರಾಹುಲ್ ಗಾಂಧಿ, 'ಯಾರೂ ಒಳನುಗ್ಗಿಲ್ಲ, ನಮ್ಮ ಭೂಪ್ರದೇಶವನ್ನು ಯಾರೂ ಆಕ್ರಮಿಸಿಕೊಂಡಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಪ್ಯಾಂಗೊಂಗ್ ಸರೋವರದ ಬಳಿಯ ಚೀನಾ ಭಾರತ ಮಾತೆಯ ಪವಿತ್ರ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಉಪಗ್ರಹ ಚಿತ್ರಗಳು ಸ್ಪಷ್ಟವಾಗಿ ತೋರಿಸುತ್ತವೆ' ಎಂದಿದ್ದಾರೆ.

ಟಿವಿ ಚಾನೆಲ್‌ವೊಂದು ತೋರಿಸಿದ ವಿಡಿಯೋವನ್ನು ಬಳಸಿಕೊಂಡು ರಾಹುಲ್ ಗಾಂಧಿ ಟ್ವೀಟ್​ ಮಾಡಿದ್ದಾರೆ.

ಇದಕ್ಕೂ ಮುನ್ನ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ರಾಹುಲ್ ಗಾಂಧಿ 'ಪ್ರಧಾನಿ ನರೇಂದ್ರ ಮೋದಿ ನಿಜವಾಗಿ ಸರೇಂಡರ್ ಮೋದಿ' ಎಂದಿದ್ದರು. ಭಾರತದ ಭೂಪ್ರದೇಶವನ್ನು ಚೀನೀಯರಿಗೆ ಒಪ್ಪಿಸಿ ಶರಣಾಗಿದ್ದಾರೆ ಎಂದು ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.