ETV Bharat / bharat

ಕಾಶ್ಮೀರದ ವಿಶೇಷಾಧಿಕಾರ ರದ್ದು: ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ, ರಾಜ್ಯಕ್ಕೆ ಸುಪ್ರೀಂ ಸೂಚನೆ

author img

By

Published : Oct 1, 2019, 12:41 PM IST

ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ಆರ್ಟಿಕಲ್​ 370 ಅನ್ನು ಹಿಂದಕ್ಕೆ ಪಡೆದಿತ್ತು. ಕಾಶ್ಮೀರದಲ್ಲಿ ಪತ್ರಕರ್ತರ ಓಡಾಟಕ್ಕೆ ನಿರ್ಬಂಧ ಮತ್ತು ಮಕ್ಕಳನ್ನೂ ವಶದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್​ಗೆ ಸಲ್ಲಿಕೆಯಾಗಿದ್ದವು. ನ್ಯಾಷನಲ್​ ಕಾನ್ಫರೆನ್ಸ್, ನಿವೃತ್ತ ಸೇನಾಧಿಕಾರಿಗಳು ಮತ್ತು ನಾಗರಿಕ ಸೇವೆ ಅಧಿಕಾರಿಗಳು ಕೂಡ ಸರ್ಕಾರದ ನಡೆಯನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ನವೆಂಬರ್​ 13ಕ್ಕೆ ನಿಗದಿಗೊಳಿಸಿದೆ.

ಸಾಂದರ್ಭಿಕ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್​ನ ನ್ಯಾಯಪೀಠ, ಐದು ವಾರ ಕಾಲಾವಕಾಶ ನೀಡಿ, ಅಫಿಡವಿಟ್​ ಸಲ್ಲಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕಾಶ್ಮೀರದಲ್ಲಿ ಪತ್ರಕರ್ತರ ಓಡಾಟಕ್ಕೆ ನಿರ್ಬಂಧ ಮತ್ತು ಮಕ್ಕಳನ್ನೂ ವಶದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್​ಗೆ ಸಲ್ಲಿಕೆಯಾಗಿದ್ದವು. ನ್ಯಾಷನಲ್​ ಕಾನ್ಫರೆನ್ಸ್, ನಿವೃತ್ತ ಸೇನಾಧಿಕಾರಿಗಳು ಮತ್ತು ನಾಗರಿಕ ಸೇವೆಯ ಅಧಿಕಾರಿಗಳು ಕೂಡ ಸರ್ಕಾರದ ನಡೆಯನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್​ 13ಕ್ಕೆ ನಿಗದಿಗೊಳಿಸಿದೆ.

ನ್ಯಾಯಮೂರ್ತಿ ಎನ್​.ವಿ. ರಮಣ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಆರ್ ಸುಭಾಷ್ ರೆಡ್ಡಿ, ಬಿ. ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರಿದ್ದ ಸಂವಿಧಾನ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ಸಂವಿಧಾನದ ವಿಧಿ 370 ಹಾಗೂ 35ಎ ವಿಶೇಷ ಸ್ಥಾನಮಾನವನ್ನು ವಾಪಸ್​ ಪಡೆಯುವ ವಿಧೇಯಕವನ್ನು ಅನುಮೋದನೆಗೊಳಿಸಿತ್ತು.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.