ನವದೆಹಲಿ: ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಜಾಮೀನು ನೀಡುವಂತೆ ಕೋರಿ ಮಾಜಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ್ ಒಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿತು. ಶಬರಿಮಲೆ ಪ್ರಕರಣ ವಿಚಾರಣೆ ಮುಗಿದ ಬಳಿಕ ಸಜ್ಜನ್ ಕುಮಾರ್ ಪ್ರಕರಣ ವಿಚಾರಣೆ ಮಾಡುವುದಾಗಿ ನ್ಯಾಯಪೀಠ ಹೇಳಿದೆ.
ಏನಿದು ಪ್ರಕರಣ?
ಸಿಖ್ ವಿರೋಧಿ ದಂಗೆ ಸಂಬಂಧ ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ಗೆ 2018ರ ಡಿಸೆಂಬರ್ 17ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ ಅಂಗರಕ್ಷಕರ ಗುಂಡಿಗೆ ಬಲಿಯಾದ ನಂತರದಲ್ಲಿ ನವೆಂಬರ್1-2ರ ನಡುವೆ ಸಿಖ್ ವಿರೋಧಿ ದಂಗೆ ನಡೆದಿತ್ತು.