ETV Bharat / bharat

ಕೋವಿಡ್​ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಕೈಗೊಳ್ಳಲು ರಾಜ್ಯಗಳಿಗೆ 'ಸುಪ್ರೀಂ' ನಿರ್ದೇಶನ

author img

By

Published : Dec 18, 2020, 1:18 PM IST

Updated : Dec 18, 2020, 1:32 PM IST

ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪ್ರತಿ ರಾಜ್ಯ ಸರ್ಕಾರಗಳು ನೋಡಲ್ ಅಧಿಕಾರಿಯನ್ನು ನೇಮಿಸಬೇಕು..

ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ : ಕೋವಿಡ್​-19 ಆಸ್ಪತ್ರೆಗಳು ಸೇರಿ ಎಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತೆಗೆ ಸಂಬಂಧಿಸಿದಂತೆ ಪರಿಶೀಲಿಸಲು ಪ್ರತಿ ತಿಂಗಳು ಕೈಗೊಳ್ಳಲು ಸಮಿತಿಗಳನ್ನು ರಚಿಸುವಂತೆ ಸುಪ್ರೀಂಕೋರ್ಟ್‌ನ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳಿಗೆ ಶುಕ್ರವಾರ ಸೂಚಿಸಿದೆ.

  • Supreme Court orders all State governments & Union Territories to form committees to undertake fire safety audit of all hospitals, incl COVID19 hospitals, every month.

    SC says every state govt must appoint a nodal officer to ensure adherence to fire safety norms in hospitals pic.twitter.com/gF0cYxpZoT

    — ANI (@ANI) December 18, 2020 " class="align-text-top noRightClick twitterSection" data=" ">

ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪ್ರತಿ ರಾಜ್ಯ ಸರ್ಕಾರಗಳು ನೋಡಲ್ ಅಧಿಕಾರಿಯನ್ನು ನೇಮಿಸಬೇಕು ಎಂದು ನ್ಯಾಯಮೂರ್ತಿ ಭೂಷಣ್ ನೇತೃತ್ವದ ನ್ಯಾಯಪೀಠವು ಹೇಳಿದೆ.

ಓದಿ:ಕೇಂದ್ರದ ಅಶ್ಲೀಲ ಹಸ್ತಕ್ಷೇಪ ಅಸಂವಿಧಾನಿಕ.. ಐಪಿಎಸ್ ಅಧಿಕಾರಿಗಳ ವರ್ಗಾವಣೆ ಖಂಡಿಸಿದ ಕೇಜ್ರಿವಾಲ್

ಫೈರ್ ನೋ ಆಬ್ಜೆಕ್ಷನ್ ಪ್ರಮಾಣಪತ್ರವನ್ನು (ಎನ್‌ಒಸಿ) ನವೀಕರಿಸದ ಆಸ್ಪತ್ರೆಗಳು ಅದನ್ನು ತಕ್ಷಣವೇ ನವೀಕರಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ಕೊರೊನಾ ಕಾರಣದಿಂದಾಗಿ ತಿಂಗಳು ಪೂರ್ತಿ ನಿರಂತರವಾಗಿ ಕೆಲಸ ಮಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗೆ ವಿರಾಮ ನೀಡಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ಈ ಆದೇಶಕ್ಕೆ ಸಂಬಂಧಿಸಿದಂತೆ ಅಫಿಡವಿಟ್​ನ ಸಲ್ಲಿಸಲು ಕೋರ್ಟ್​ ರಾಜ್ಯ ಮತ್ತು ಕೇಂದ್ರ ಪ್ರದೇಶಗಳಿಗೆ ನಾಲ್ಕು ವಾರಗಳ ಗಡುವು ನೀಡಿದೆ.

Last Updated : Dec 18, 2020, 1:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.