ETV Bharat / bharat

ಹಥ್ರಾಸ್ ಪ್ರಕರಣದ ಸಾಕ್ಷಿ ರಕ್ಷಿಸಲು ಕೈಗೊಂಡ ಕ್ರಮಗಳನ್ನು ತಿಳಿಸಿ: ಯುಪಿ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

ಹಥ್ರಾಸ್ ಪ್ರಕರಣದ ಸಾಕ್ಷಿ ರಕ್ಷಿಸಲು ಕೈಗೊಂಡ ಕ್ರಮಗಳ ಕುರಿತು ತಿಳಿಸುವಂತೆ ಸುಪ್ರೀಂಕೋರ್ಟ್​ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

supreme court
supreme court
author img

By

Published : Oct 6, 2020, 3:19 PM IST

ನವದೆಹಲಿ: ಹಥ್ರಾಸ್ ಪ್ರಕರಣದ ಸಾಕ್ಷಿ ರಕ್ಷಣೆಗೆ ಕೈಗೊಂಡ ಕ್ರಮಗಳ ಕುರಿತು ಅಕ್ಟೋಬರ್ 8ರೊಳಗೆ ತಿಳಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.

ರಾಜಕೀಯ ಉದ್ದೇಶಗಳೊಂದಿಗೆ ಈ ಪ್ರಕರಣದ ಕುರಿತು ನಕಲಿ ನಿರೂಪಣೆಗಳು ಹರಡುತ್ತಿರುವುದರಿಂದ ಉತ್ತರ ಪ್ರದೇಶ ಸರ್ಕಾರವು ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪಿಐಎಲ್​ ವಿಚಾರಣೆಯ ನಡೆಸುತ್ತಿರುವ ಸಂದರ್ಭ ಉತ್ತರ ಪ್ರದೇಶ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸುವ ಕುರಿತು ಪ್ರಸ್ತಾಪಿಸಿದೆ.

ಈ ಘಟನೆಯನ್ನು ಭಯಾನಕ ಮತ್ತು ಅಸಾಧಾರಣವೆಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ಪ್ರಕರಣದಲ್ಲಿ ತನಿಖೆ ಸರಿಯಾಗ ನಡೆಯಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರ ಈಗಾಗಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ಎಫ್ಎಸ್ಎಲ್ ವರದಿಗಳು ಅತ್ಯಾಚಾರ ಆರೋಪವನ್ನು ನಿರಾಕರಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.