ETV Bharat / bharat

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿ ವಜಾ

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
author img

By

Published : Oct 16, 2020, 5:33 PM IST

ನವದೆಹಲಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ದೆಹಲಿ ನಿವಾಸಿಗಳಾದ ವಿಕ್ರಮ್ ಗೆಹ್ಲೋಟ್, ರಿಷಬ್ ಜೈನ್ ಮತ್ತು ಗೌತಮ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್​​ ನ್ಯಾಯಪೀಠ ವಜಾಗೊಳಿಸಿದೆ.

"ಓರ್ವ ನಾಗರಿಕನಾಗಿ ರಾಷ್ಟ್ರಪತಿಯನ್ನು ಭೇಟಿಯಾಗಲು ನಿಮಗೆ ಸ್ವಾತಂತ್ರ್ಯವಿದೆ. ಕೋರ್ಟ್​ಗೆ ಬರಬೇಡಿ. ಬಾಲಿವುಡ್​ ನಟ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಕಾರಣಕ್ಕೆ ಮಹಾರಾಷ್ಟ್ರದಲ್ಲಿ ಸಂವಿಧಾನವನ್ನು ಅನುಸರಿಸುತ್ತಿಲ್ಲ ಎಂದು ನೀವು ಹೇಳುತ್ತೀರಿ. ಆದರೆ ಮಹಾರಾಷ್ಟ್ರ ಎಷ್ಟು ದೊಡ್ಡದಾಗಿದೆ ಎಂದು ತಿಳಿದಿದೆಯೇ? ನಾವು ಇಂತಹ ಕೇಸುಗಳನ್ನು ಉತ್ತೇಜಿಸುವುದಿಲ್ಲ. ಅರ್ಜಿ ವಜಾಗೊಳಿಸಲಾಗಿದೆ" ಎಂದು ನ್ಯಾಯಪೀಠ ತಿಳಿಸಿದೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಅಪರಾಧಿಗಳನ್ನು ರಕ್ಷಿಸಲು ಮಾತ್ರವಲ್ಲ, ಕ್ರಿಮಿನಲ್​ ಚಟುವಟಿಕೆಗೆ ನಿರಂತರವಾಗಿ ಪ್ರೋತ್ಸಾಹಿಸುತ್ತಿವೆ. ಹೀಗಾಗಿ ಶಿವಸೇನೆ ಸರ್ಕಾರವನ್ನು ತೆಗೆದು ಹಾಕಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

ತಮ್ಮ ಅರ್ಜಿಯ ಜೊತೆಗೆ ನಟ ಸುಶಾಂತ್​ ಸಿಂಗ್​ ಸಾವು ಪ್ರಕರಣ, ಕಂಗನಾ ರಣಾವತ್​ಗೆ​ ಬೆದರಿಕೆ ಹಾಕಿ ಅವರ ಕಚೇರಿ ಕೆಡವಿದ ವಿಚಾರ, ನೌಕಾಪಡೆಯ ಮಾಜಿ ಅಧಿಕಾರಿ ಮದನ್ ಲಾಲ್ ಶರ್ಮಾ ಅವರ ಮೇಲೆ ನಡೆದ ಹಲ್ಲೆ ಸಂಬಂಧಿತ ವಿಚಾರಗಳನ್ನು ಪ್ರಸ್ತಾಪಿಸಿದ್ದರು.

ರಾಷ್ಟ್ರಪತಿಗಳ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ ಅರ್ಜಿದಾರರು, ಇಡೀ ಮಹಾರಾಷ್ಟ್ರವಲ್ಲದಿದ್ದರೂ ಸಹ ಕನಿಷ್ಠ ಮುಂಬೈ ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಹೇರಬೇಕು. ಅಲ್ಲಿ ವಾಸಿಸುವ ಸಾಮಾನ್ಯ ನಾಗರಿಕರ ಸುರಕ್ಷತೆ, ಯೋಗಕ್ಷೇಮಕ್ಕಾಗಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.