ETV Bharat / bharat

ಮಸೀದಿಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕೋರಿ ಮನವಿ : ಕೇಂದ್ರಕ್ಕೆ ಸುಪ್ರೀಂ ನೋಟಿಸ್​

ಪುಣೆ ಮೂಲದ ಮುಸ್ಲಿಂ ಮಹಿಳೆಯರು ಸಲ್ಲಿಸಿರುವ ಮುಸ್ಲಿಂ ಮಹಿಳೆಯರಿಗೆ ಮಸೀದಿಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ಮನವಿಗೆ ಸ್ಪಂದಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮಸೀದಿಗಳಲ್ಲಿ ಮಹಿಳೆಯರ ಪ್ರವೇಶ
ಮಸೀದಿಗಳಲ್ಲಿ ಮಹಿಳೆಯರ ಪ್ರವೇಶ
author img

By

Published : May 20, 2020, 8:31 PM IST

ನವದೆಹಲಿ: ಮುಸ್ಲಿಂ ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶವಿಲ್ಲ ಎಂಬ ನಿರ್ಬಂಧಗಳು ‘ಅಸಾಂವಿಧಾನಿಕ’. ಸಮಾನತೆ ಮತ್ತು ಲಿಂಗ ನ್ಯಾಯದ ಹಕ್ಕನ್ನು ಉಲ್ಲಂಘಿಸಿವೆ ಎಂದು ಆರೋಪಿಸಿ ದೇಶಾದ್ಯಂತ ಮುಸ್ಲಿಂ ಮಹಿಳೆಯರಿಗೆ ಮಸೀದಿಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ಮನವಿಗೆ ಸ್ಪಂದಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ನ್ಯಾಯಪೀಠವು ಅರ್ಜಿಯನ್ನು ಆಲಿಸಲು ಒಪ್ಪಿಗೆ ನೀಡಿತು.

ನ್ಯಾಯಮೂರ್ತಿಗಳಾದ ಎಸ್.ಎಸ್.ಬೋಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೂ ಒಳಗೊಂಡ ನ್ಯಾಯಪೀಠವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಇತರರಿಗೆ ಮನವಿಯ ಕುರಿತಾಗಿ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ.

ಪುಣೆ ಮೂಲದ ಮುಸ್ಲಿಂ ಮಹಿಳೆಯರು ಸಲ್ಲಿಸಿರುವ ಮನವಿಯಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲೇಖಿಸಲಾಗಿದೆ. ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನ್ಮಸ್ಥಳದ ಆಧಾರದ ಮೇಲೆ ಯಾವುದೇ ನಾಗರಿಕರ ವಿರುದ್ಧ ಯಾವುದೇ ತಾರತಮ್ಯ ಮಾಡಬಾರದು ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಮಹಿಳೆಯರ ಮತ್ತು ಮುಸ್ಲಿಂ ಮಹಿಳೆಯರ ಘನತೆ ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಶಾಸಕಾಂಗವು ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಸಂವಿಧಾನದ ವಿಧಿಗಳು 14 (ಕಾನೂನಿನ ಮುಂದೆ ಸಮಾನತೆ) ಮತ್ತು 2 ಎಲ್ (ಜೀವ ರಕ್ಷಣೆ ಮತ್ತು ವೈಯಕ್ತಿಕ ಸ್ವಾತಂತ್ರ್ಯ) ಉಲ್ಲಂಘಿಸಿ, ಮುಸ್ಲಿಂ ಮಹಿಳೆಯರಿಗೆ ಮಸೀದಿಗಳ ಮುಖ್ಯ ಪ್ರಾರ್ಥನಾ ಮಂದಿರದಲ್ಲಿ ಪ್ರವೇಶಿಸಲು ಮತ್ತು ಪ್ರಾರ್ಥಿಸಲು ಅವಕಾಶವಿಲ್ಲದ ಕಾರಣ ತಾರತಮ್ಯ ಮಾಡಲಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಭಾರತದಲ್ಲಿ ಮಸೀದಿಯಲ್ಲಿ ಮುಸ್ಲಿಂ ಮಹಿಳೆಯರನ್ನು ಪ್ರವೇಶಿಸುವುದನ್ನು ನಿಷೇಧಿಸುವ ಅಭ್ಯಾಸವನ್ನು ಕಾನೂನುಬಾಹಿರ, ಅಸಂವಿಧಾನಿಕ ಮತ್ತು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಎಂದು ಘೋಷಿಸಲು ಅದು ಪ್ರಯತ್ನಿಸಿದೆ.

ಪವಿತ್ರ ಕುರಾನ್​​​​ ಮತ್ತು ಹದೀಸ್‌ನಲ್ಲಿ ಲಿಂಗ ಪ್ರತ್ಯೇಕತೆಯ ಅಗತ್ಯವಿರುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.