ನವದೆಹಲಿ: ಜುಲೈ ಮೊದಲ ವಾರದಲ್ಲಿ ನಡೆಯಬೇಕಿದ್ದ 10 ಮತ್ತು 12ನೇ ತರಗತಿ ಸಿಬಿಎಸ್ಇ ಪರೀಕ್ಷೆಗಳನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ 10 ಮತ್ತು 12ನೇ ತರಗತಿಯ ಪರೀಕ್ಷೆ ರದ್ದುಗೊಳಿಸಿ ಅಧಿಸೂಚನೆ ಹೊರಡಿಸುವಂತೆ ಸಿಬಿಎಸ್ಇಗೆ ಕೋರ್ಟ್ ಸೂಚಿಸಿದೆ.
ಲಾಕ್ಡೌನ್ಗೂ ಮೊದಲೇ ಕೆಲ ವಿಷಯಗಳಿಗೆ ಪರೀಕ್ಷೆಗಳು ನಡೆದಿತ್ತು. ಕೋವಿಡ್ ಭೀತಿಯಿಂದಾಗಿ ಉಳಿದ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿ, ರದ್ದಾದ ಪತ್ರಿಕೆಗಳಿಗೆ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡುವ ಯೋಜನೆಯ ಪ್ರಸ್ತಾವನೆಯನ್ನು ಪರೀಕ್ಷಾ ಮಂಡಳಿಯು ನ್ಯಾಯಾಲಯದ ಮುಂದಿರಿಸಿತ್ತು.
ಇಂದು ಇದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಂಜೀವ್ ಖನ್ನಾ ಅವರ ನ್ಯಾಯಪೀಠವು ಪರೀಕ್ಷೆಗಳನ್ನು ರದ್ದುಗೊಳಿಸುವ ಬಗ್ಗೆ ಅಧಿಸೂಚನೆ ಹೊರಡಿಸಲು ಸಿಬಿಎಸ್ಇಗೆ ಅನುಮತಿ ನೀಡಿದೆ.