ETV Bharat / bharat

‘ಒನ್ ನೇಷನ್​ ಒನ್ ರೇಷನ್ ಕಾರ್ಡ್’ ಪಿಐಎಲ್​ ವಜಾಗೊಳಿಸಿದ ಸುಪ್ರೀಂಕೋರ್ಟ್​

author img

By

Published : Apr 27, 2020, 9:13 PM IST

ಲಾಕ್ ಡೌನ್ ಸಮಯದಲ್ಲಿ 'ಒನ್ ನೇಷನ್​ ಒನ್ ರೇಷನ್ ಕಾರ್ಡ್' ಯೋಜನೆಯನ್ನು ಜಾರಿಗೆ ತರಲು ಕೋರಿ ಸಲ್ಲಿಸಿದ್ದ ಪಿಐಎಲ್​ನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ.

‘ಒನ್ ನೇಷನ್​ ಒನ್ ರೇಷನ್ ಕಾರ್ಡ್’ ಪಿಐಎಲ್​ ವಜಾ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಸಿಲುಕಿರುವ ಜನರು ಪಡಿತರ ಚೀಟಿಗಳನ್ನು ಹೊಂದಿರದ ಕಾರಣ ಲಾಕ್​​ಡೌನ್​​ ಸಮಯದಲ್ಲಿ 'ಒನ್ ನೇಷನ್​ ಒನ್ ರೇಷನ್ ಕಾರ್ಡ್' ಯೋಜನೆಯನ್ನು ಜಾರಿಗೆ ತರಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಈ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಮತ್ತು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ನ್ಯಾಯಾಲಯ ಹೇಳಿದೆ.

ಏಪ್ರಿಲ್ 17 ರಂದು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದ್ದು, ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಇಲ್ಲದಿರುವುದರಿಂದ ತಾತ್ಕಾಲಿಕವಾಗಿ "ಒನ್ ನೇಷನ್​ ಒನ್​ ಅಂಬ್ರೆಲ್ಲಾ" ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಲಾಗಿತ್ತು.

ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ಮನವಿಯನ್ನು ನಿರಾಕರಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.