ನವದೆಹಲಿ/ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ನಿಂದ ಉಚ್ಛಾಟನೆಗೊಂಡಿರುವ ಮತ್ತು ಅಂದಿನ ಸ್ಪೀಕರ್ ಅವರಿಂದ ಅರ್ನಹಗೊಂಡಿರುವ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆಯಾಗಿದೆ.
ಅನರ್ಹತೆಯನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆಗೆ ಮನವಿ ಸಲ್ಲಿಸಿದ್ದರು. ಆದರೆ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ತುರ್ತು ವಿಚಾರಣೆಗೆ ಸ್ಪಷ್ಟವಾದ ಕಾರಣ ಬೇಕು ಎಂದಿರುವ ಕೋರ್ಟ್, ಸದ್ಯಕ್ಕೆ ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿದೆ. ಅನರ್ಹ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು.