ನವದೆಹಲಿ: ಲಾಕ್ಡೌನ್ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಪೂರ್ಣ ವೇತನ ಹೇಗೆ ಪಾವತಿಸಲಾಗುತ್ತದೆ ಎಂಬುದರ ಬಗ್ಗೆ ಎರಡು ವಾರದ ಒಳಗೆ ಖಚಿತಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಲಾಕ್ಡೌನ್ ಸಮಯದಲ್ಲಿ ಸರ್ಕಾರಿ ನೌಕರರಿಗೆ ಪೂರ್ಣ ವೇತನ ನೀಡುವಂತೆ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಮೇರೆಗೆ ಈ ನಿಟ್ಟಿನಲ್ಲಿ ತನ್ನ ನೀತಿಯನ್ನು ದಾಖಲಿಸುವಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.