ನವದೆಹಲಿ: ಲಾಕ್ಡೌನ್ ಹಿನ್ನೆಲೆ ಮಾಧ್ಯಮ ಉದ್ಯಮದಲ್ಲಿನ ನೌಕರರ ವಜಾ ಮತ್ತು ವೇತನ ಕಡಿತದ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಕುರಿತು ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ನೀಡಿದೆ.
ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಬಿ.ಆರ್. ಗವಾಯಿ ಒಳಗೊಂಡ ಮೂವರು ನ್ಯಾಯಾಧೀಶರ ನ್ಯಾಯಪೀಠ, ಯೂನಿಯನ್ ಆಫ್ ಇಂಡಿಯಾ (ಯುಒಐ), ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ (ಐಎನ್ಎಸ್) ಮತ್ತು ನ್ಯೂಸ್ ಬ್ರಾಡ್ಕಾಸ್ಟರ್ಸ್ ಅಸೋಸಿಯೇಶನ್ (ಎನ್ಬಿಎ) ಗೆ ನೋಟಿಸ್ ಜಾರಿಗೊಳಿಸಿದೆ.
ನ್ಯಾಷನಲ್ ಅಲೈಯನ್ಸ್ ಆಫ್ ಜರ್ನಲಿಸ್ಟ್ಸ್, ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್ಸ್ ಮತ್ತು ಬ್ರುಹನ್ ಮುಂಬೈ ಯೂನಿಯನ್ ಆಫ್ ಜರ್ನಲಿಸ್ಟ್ಸ್ ಜಂಟಿಯಾಗಿ ಪಿಐಎಲ್ ಸಲ್ಲಿಸಿದ್ದವು.
ಮಾಧ್ಯಮಗಳು ಲಾಕ್ಡೌನ್ ಅವಧಿಯನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಮತ್ತು ನೌಕರರನ್ನು ವಜಾಗೊಳಿಸುತ್ತಿರುವ ಮಾಧ್ಯಮ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಿಐಎಲ್ನಲ್ಲಿ ಮನವಿ ಮಾಡಲಾಗಿದೆ.