ನವದೆಹಲಿ: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಮರುಪರಿಶೀಲನೆ ಮಾಡಲು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಇಂದು ನಡೆಯುತ್ತದೆ.
ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದಲ್ಲಿ ,ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಎ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡಂತೆ ಇಂದು ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಯಲಿದೆ. ಈ ವಿಚಾರಣೆ ಚೇಂಬರ್ನ ಒಳಗಡೆ ನಡೆಯಲಿದೆ.
ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ಪೀಠ, ಹಲವಾರು ದಶಕಗಳಿಂದ ಕಾನೂನು ಹೋರಾಟ ಮಾಡಿಕೊಂಡು ಬಂದಿದ್ದ ಅಯೋಧ್ಯೆ ವಿವಾದಕ್ಕೆ ನ.9ರಂದು ಮಹತ್ವದ ತೀರ್ಪು ನೀಡಿತ್ತು. ಈ ಪೀಠದಲ್ಲಿ ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಇದ್ದರು.