ನವದೆಹಲಿ: ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಹಾಗೂ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೆ ಶಾಲೆಗಳನ್ನು ಮರು ತೆರೆಯಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.
ಸ್ಥಳೀಯ ಸೋಂಕಿತರ ಅಂಕಿ ಅಂಶದ ಆಧಾರದ ಮೇಲೆ ಶಾಲೆಗಳನ್ನು ತೆರೆಯಬಹುದು. ಸೋಂಕಿತರ ಸಂಖ್ಯೆ ಹೆಚ್ಚಿರುವ ಕಡೆ ಶಾಲೆ ಆರಂಭಿಸಬೇಕೆಂಬ ಪ್ರಶ್ನೆ ಬರುವುದಿಲ್ಲ. ರಿಸ್ಕ್ ವರ್ಸಸ್ ಲಾಭಗಳನ್ನು ಪರಿಶೀಲಿಸಿ ನಿರ್ಧರಿಸುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಪುನಾರಂಭಿಸಲು ಸರ್ಕಾರಗಳು ಚಿಂತನೆ ನಡೆಸಿವೆ.