ETV Bharat / bharat

ಪ.ಬಂಗಾಳದಲ್ಲಿ ಏ.30ರವರೆಗೆ ಲಾಕ್​ಡೌನ್​ ವಿಸ್ತರಣೆ: ಜೂನ್​ 10 ರವರೆಗೆ ಶಾಲಾ-ಕಾಲೇಜು​ ಬಂದ್

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್​ 30ರವರೆಗೆ ಲಾಕ್​ಡೌನ್​ ಮುಂದುವರಿಕೆಯಾಗಿದೆ.

West Bengal CM Mamata Banerjee
West Bengal CM Mamata Banerjee
author img

By

Published : Apr 11, 2020, 7:39 PM IST

ಕೋಲ್ಕತ್ತಾ: ದೇಶದಲ್ಲಿ ಏಪ್ರಿಲ್​ 30ರವರೆಗೆ ಲಾಕ್​ಡೌನ್​ ಮುಂದುವರಿಕೆಯಾಗಿದ್ದು, ಪ್ರಧಾನಿ ನರೇಂದ್ರ ಜತೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ಮಹತ್ವದ ನಿರ್ಧಾರ ಹೊರಹಾಕುತ್ತಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಏಪ್ರಿಲ್​ 30ರವರೆಗೆ ರಾಜ್ಯದಲ್ಲಿ ಲಾಕ್​ಡೌನ್ ಮುಂದುವರಿಯಲಿದ್ದು, ಜೂನ್​ 10ರವರೆಗೆ ಶಾಲಾ-ಕಾಲೇಜ್​ ಬಂದ್​ ಇರಲಿವೆ ಎಂಬ ಮಾಹಿತಿ ನೀಡಿದ್ದಾರೆ.

ಪ.ಬಂಗಾಳದಲ್ಲಿ ಏ.30ರವರೆಗೆ ಲಾಕ್​ಡೌನ್​ ವಿಸ್ತರಣೆ

ರಾಜ್ಯದಲ್ಲಿನ 9-10 ಆಸ್ಪತ್ರೆಗಳಲ್ಲಿ ಹೆಚ್ಚಿನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಕಳೆದ ಮೂರು ವಾರಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿವೆ. ನಾವು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಬದ್ಧವಾಗಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇಲ್ಲಿಯವರೆಗೆ 95 ಕೋವಿಡ್​ ಪ್ರಕರಣ ಪತ್ತೆಯಾಗಿದ್ದು, ಇಂದು ಕೂಡ 6 ಹೊಸ ಪ್ರಕರಣ ಕಂಡು ಬಂದಿವೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.