ETV Bharat / bharat

ಆಗ್ರಾದಲ್ಲಿ ಕೊರೊನಾ ಸೋಂಕಿಗೆ ಹಿರಿಯ ಪತ್ರಕರ್ತ ಬಲಿ - ಪತ್ರಕರ್ತ

ಆಗ್ರಾದಲ್ಲಿ ಹಿರಿಯ ಪತ್ರಕರ್ತರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಆಗ್ರಾ ನಗರದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 22 ಕ್ಕೇರಿದೆ.

Scribe succumbs to COVID-19 in Agra
ಆಗ್ರಾದಲ್ಲಿ ಕೊರೊನಾ ಸೋಂಕಿಗೆ ಹಿರಿಯ ಪತ್ರಕರ್ತ ಬಲಿ
author img

By

Published : May 8, 2020, 7:37 PM IST

ಆಗ್ರಾ: ಉತ್ತರ ಪ್ರದೇಶದ ಆಗ್ರಾ ನಗರದಲ್ಲಿ ಹಿರಿಯ ಪತ್ರಕರ್ತರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಈವರೆಗೆ ಒಟ್ಟು 678 ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 22 ಜನ ಕೋವಿಡ್​-19 ವೈರಸ್​​ ತಗುಲಿ ಪ್ರಾಣಬಿಟ್ಟಿದ್ದಾರೆ.

ಕೊರೊನಾ ಸೋಂಕು ತಗುಲಿದ್ದ ಪತ್ರಕರ್ತನನ್ನು ಎಸ್.ಎನ್. ವೈದ್ಯಕೀಯ ಕಾಲೇಜಿನಲ್ಲಿ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ಆಗ್ರಾದ ಜಿಲ್ಲಾ ಮ್ಯಾಜಿಸ್ಟ್ರೇಟ್‌​ ಪ್ರಭು ಎನ್.​ ಸಿಂಗ್​ ತಿಳಿಸಿದ್ದಾರೆ.

ರಾಜ್ಯದ ಮಾನ್ಯತೆ ಪಡೆದ ವರದಿಗಾರರ ಸಮಿತಿಯು ಮೃತ ಪತ್ರಕರ್ತನ ಕುಟುಂಬಕ್ಕೆ 50 ಲಕ್ಷ ರೂ.ಗಳ ಪರಿಹಾರ ಮತ್ತು ಅವರ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ. ಪತ್ರಕರ್ತರನ್ನು ಕೊರೊನಾ ವಾರಿಯರ್ಸ್​ ಎಂದೇ ಪರಿಗಣಿಸಿ ಅವರಿಗೆ 50 ಲಕ್ಷ ರೂ.ಗಳ ವಿಮಾ ರಕ್ಷಣೆಯನ್ನು ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.