ನೋಯ್ಡಾ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮಾರಣಾಂತಿಕ ಹಲ್ಲೆಗೊಳಗಾಗಿ ಮೃತಪಟ್ಟಿರುವ ದಲಿತ ಯುವತಿ ಕುಟುಂಬದ ಸದಸ್ಯರ ಭೇಟಿ ಮಾಡಲು ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ ಐವರಿಗೆ ಅನುಮತಿ ನೀಡಲಾಗಿದೆ.
ದೆಹಲಿಯಿಂದ ತೆರಳುತ್ತಿದ್ದ ವೇಳೆ ನೋಯ್ಡಾ ಫ್ಲೈಓವರ್ ಬಳಿ ಇವರನ್ನ ತಡೆ ಹಿಡಿಯಲಾಗಿತ್ತು. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಉತ್ತರಪ್ರದೇಶ ಪೊಲೀಸರ ನಡುವೆ ಜಟಾಪಟಿಯಾಗಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಲು ಪೊಲೀಸರು ಮುಂದಾಗುತ್ತಿದ್ದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಧ್ಯ ಪ್ರವೇಶ ಮಾಡಿದ್ದು, ತಮ್ಮ ಪಕ್ಷದ ಕಾರ್ಯಕರ್ತರನ್ನ ರಕ್ಷಣೆ ಮಾಡಲು ಧಾವಿಸಿದ್ದಾರೆ.
ಹಥ್ರಾಸ್ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ರಾಹುಲ್, ಪ್ರಿಯಾಂಕ ಸೇರಿ ಐವರಿಗೆ ಅನುಮತಿ
ಹಥ್ರಾಸ್ ಅತ್ಯಾಚಾರ ಪ್ರಕರಣ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಪಂಜಾಬ್, ಕೋಲ್ಕತ್ತಾ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.