ಟ್ರಾಲ್ (ಜಮ್ಮು ಕಾಶ್ಮೀರ): ಭಯೋತ್ಪಾದಕರಿಗಾಗಿ ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಶೋಧ ಕಾರ್ಯ ಆರಂಭವಾಗಿದ್ದು, ಟ್ರಾಲ್ ಪ್ರದೇಶದಲ್ಲಿ ಉಗ್ರರಿಗಾಗಿ ಹುಡುಕಾಟ ಆರಂಭವಾಗಿದೆ.
ವರದಿಗಳ ಪ್ರಕಾರ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ದೇವಾರ್ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ವೇಳೆ ಭದ್ರತಾ ಪಡೆಯ ಯೋಧರ ಜೊತೆ ಜಮ್ಮು - ಕಾಶ್ಮೀರ ಪೊಲೀಸ್, ಸಿಆರ್ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟ್ರಾಲ್ ಪ್ರದೇಶಕ್ಕೆ ಒಳಹೋಗುವ ಹಾಗೂ ಹೊರಬರುವ ಮಾರ್ಗಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇದರ ಜೊತೆಗೆ ಮನೆ ಮನೆಗಳಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.