ಅಯೋಧ್ಯೆ: ದೆಹಲಿಯಲ್ಲಿ ಐಸಿಸ್ ಉಗ್ರನನ್ನು ಬಂಧಿಸಿದ ಬಳಿಕ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ರಾಮ ಮಂದಿರದ ಭೂಮಿ ಪೂಜೆ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಎಚ್ಚರಿಕೆ ನೀಡಲಾಗಿತ್ತು. ಹೀಗಾಗಿ ಇಂದು ದೆಹಲಿಯಲ್ಲಿ ಉಗ್ರನ ಬಂಧನವಾಗುತ್ತಿದ್ದಂತೆಯೇ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರವೇಶ ದ್ವಾರದ ಬಳಿ ತೀವ್ರ ತಪಾಸಣೆ ನಂತರ ಜನರಿಗೆ ಅಯೋಧ್ಯೆಗೆ ಪ್ರವೇಶ ನೀಡಲಾಗುತ್ತಿದೆ. ಅಯೋಧ್ಯೆಯ ಎಲ್ಲ ಪ್ರಮುಖ ತಾಣಗಳಲ್ಲಿ, ಧಾರ್ಮಿಕ ಸ್ಥಳಗಳಲ್ಲಿ ಪೊಲೀಸರು ಸುತ್ತುವರೆದಿದ್ದಾರೆ. ನಗರಕ್ಕೆ ಪ್ರವೇಶಿಸುವ ಪ್ರತಿಯೊಬ್ಬ ಅನುಮಾನಾಸ್ಪದ ವ್ಯಕ್ತಿಯನ್ನು ಪ್ರಶ್ನಿಸಲಾಗುತ್ತಿದೆ ಎಂದು ಅಯೋಧ್ಯೆ ಜಿಲ್ಲಾಧಿಕಾರಿ ಅಮರ್ ಸಿಂಗ್ ತಿಳಿಸಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಲ್ಲಿ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಐಸಿಸ್ ಉಗ್ರನನ್ನು ಬಂಧಿಸಿ, ಭಾರಿ ಪ್ರಮಾಣದ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ವಶಪಡಿಸಿಕೊಂಡಿದ್ದಾರೆ.