ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ಹಾಗೂ ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನಿ ಪಡೆ ಕದನ ವಿರಾಮ ಉಲ್ಲಂಘಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಮಧ್ಯರಾತ್ರಿ ಸುಮಾರು 12.30ರ ವೇಳೆ ಘಟನೆ ನಡೆದಿದ್ದು, ಆರ್ಮಿ ಹವಾಲ್ದಾರ್ ಎಸ್. ಗುರುಂಗ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ.
ಈ ವರ್ಷದ ಆರಂಭದಿಂದಲೂ ಪಾಕಿಸ್ತಾನವು 2,400 ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗಡಿಭಾಗದ ಪ್ರದೇಶದಲ್ಲಿ ವಾಸಿಸುವ ಜನರು ಪ್ರತಿನಿತ್ಯ ಭಯದಿಂದಲೇ ಬದುಕುವಂತಾಗಿದೆ.