ನವದೆಹಲಿ: ಕೊರೊನಾ ಸೋಂಕಿತರ ಚೇತರಿಕೆಯ ಪ್ರಮಾಣವನ್ನು ಗಮನಿಸಿ ತುಂಬಾ ಮಂದಿ ಕೋವಿಡ್ ವೈರಸ್ ದುರ್ಬಲವಾಗಿದೆ ಎಂದು ಭಾವಿಸಿದ್ದಾರೆ. ಇದರಿಂದ ಜನರು ಮುಂಜಾಗ್ರತೆ ವಹಿಸದೇ ಅಸಡ್ಡೆ ಹೊಂದಲು ಕಾರಣವಾಗುತ್ತಿದೆ ಎಂದು ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಕೊರೊನಾ ಸ್ಥಿತಿಗತಿಗಳ ಬಗ್ಗೆ ನಡೆಯುತ್ತಿರುವ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು ಲಸಿಕೆ ತಯಾರು ಮಾಡುತ್ತಿರುವವರು ಅವರ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ, ಜನರು ತಾವು ಎಚ್ಚರಿಕೆ ವಹಿಸಬೇಕು. ಕೊರೊನಾ ಹರಡದಂತೆ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.
ಕೋವಿಡ್ ಸ್ಥಿತಿಗತಿ, ಲಸಿಕೆ ವಿತರಣೆ ಕುರಿತು ಮೋದಿ ಮಹತ್ವದ ಸಭೆ; ಸಿಎಂ ಬಿಎಸ್ವೈ ಭಾಗಿ
ಕೇಂದ್ರ ಹಾಗೂ ರಾಜ್ಯಗಳ ಜಂಟಿ ಪ್ರಯತ್ನದ ಫಲವಾಗಿ ಭಾರತವು ಚೇತರಿಕೆ ಮತ್ತು ಸಾವಿನ ಪ್ರಮಾಣಕ್ಕೆ ಬಂದಾಗ ಇತರ ದೇಶಗಳಿಗಿಂತ ಉತ್ತಮ ಪರಿಸ್ಥಿತಿಯಲ್ಲಿದೆ. ಆಮ್ಲಜನಕ ಮತ್ತು ವೆಂಟಿಲೇಟರ್‌ಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ. ದೇಶದಲ್ಲಿ 160ಕ್ಕೂ ಹೆಚ್ಚು ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ಈ ವೇಳೆ ಸ್ಪಷ್ಟನೆ ನೀಡಿದರು.
ರಾಜ್ಯದ ಮುಖ್ಯಮಂತ್ರಿಗಳೊಡನೆ ನಡೆದ ಸಭೆಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹಾಗೂ ಹಲವರು ಭಾಗವಹಿಸಿದ್ದಾರೆ.