ವೇದಾದ್ರಿ(ಆಂಧ್ರಪ್ರದೇಶ): ಟ್ರ್ಯಾಕ್ಟರ್-ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಆಂಧ್ರಪ್ರದೇಶದ ವೇದಾದ್ರಿಯಲ್ಲಿ ನಡೆದಿದೆ.
ವೇದಾದ್ರಿ ಗ್ರಾಮದಲ್ಲಿ ವಾಸವಾಗಿದ್ದ 20 ಜನರು ಟ್ರ್ಯಾಕ್ಟರ್ನಲ್ಲಿ ತಮ್ಮ ಊರಿನತ್ತ ತೆರಳುತ್ತಿದ್ದರು. ಘಟನೆಯಲ್ಲಿ ಸಾವನ್ನಪ್ಪಿದವರು ತೆಲಂಗಾಣ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ದುರ್ಘಟನೆಯಲ್ಲಿ ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.