ETV Bharat / bharat

ಈ ಶಾಲೆಯ ಮಕ್ಕಳಿಗೆ ಬಯಲಿನಲ್ಲೇ ಪಾಠ! - undefined

ಕಟ್ಟಡ ಮತ್ತು ಮೂಲ ಸೌಕರ್ಯಗಳ ಕೊರತೆಯಿಂದಾಗಿ ಸುಡುವ ಬಿಸಿಲು, ಕೊರೆವ ಚಳಿ ಮತ್ತು ಮಳೆಯಲ್ಲೇ ಶಹಜಹಾನ್‌ಪುರದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪಾಠ ಕಲಿಯುವ ಪರಿಸ್ಥಿತಿ ಬಂದೊದಗಿದೆ.

ಬಯಲಲ್ಲಿ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು
author img

By

Published : Jul 14, 2019, 12:39 PM IST

ಶಹಜಾಹನ್ಪುರ್​​ (ಉತ್ತರಪ್ರದೇಶ): ಕಟ್ಟಡ ಮತ್ತು ಮೂಲ ಸೌಕರ್ಯಗಳ ಕೊರತೆಯಿಂದಾಗಿ ಸುಡುವ ಬಿಸಿಲು, ಕೊರೆವ ಚಳಿ ಮತ್ತು ಮಳೆಯಲ್ಲೇ ಶಹಜಾಹನ್ಪುರದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪಾಠ ಕಲಿಯುವ ಪರಿಸ್ಥಿತಿ ಬಂದೊದಗಿದೆ.

ಆ ಶಾಲೆಯ ಶಿಕ್ಷಕಿ ಮಾತನಾಡಿ, ಬಾಯಾರಿದರೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯದ ಸೌಲಭ್ಯವಂತೂ ಇಲ್ಲವೇ ಇಲ್ಲ. ಇದರಿಂದ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ತಮ್ಮ ಮನೆಗಳಿಗೆ ಹೋಗುತ್ತಾರೆ. ಒಂದು ವೇಳೆ ಮಳೆ ಬಂದರೆ ಶಾಲೆಗೆ ರಜೆ ಘೋಷಿಸುತ್ತೇವೆ ಎಂದು ಸಮಸ್ಯೆಗಳ ಬುತ್ತಿಯನ್ನು ಬಿಚ್ಚಿಟ್ಟಿದ್ದಾರೆ.

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮಾಡಿಕೊಡಲು ಜಾಗವಿಲ್ಲದೆ ಬೇರೆ ಶಾಲೆಗಳಲ್ಲಿ ಊಟ ಸಿದ್ಧಪಡಿಸಿಕೊಂಡು ಇಲ್ಲಿಗೆ ತರಬೇಕಾಗಿದೆ. ಈ ಎಲ್ಲ ಸಮಸ್ಯೆಗಳಿಂದ ವಿದ್ಯಾರ್ಥಿಗಳು ನಲಗುತ್ತಿದ್ದಾರೆ. ಇದು ಮಕ್ಕಳ ಭವಿಷ್ಯಕ್ಕೆ ಕುತ್ತು ತರುವಂತೆ ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅಧಿಕಾರಿ ರಾಕೇಶ್ ಕುಮಾರ್, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನಾನುಕೂಲತೆಯನ್ನು ಒಪ್ಪಿಕೊಂಡಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದ್ದಾರೆ.

Intro:Body:

Congress leader Navjot Singh Sidhu tweets

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.