ETV Bharat / bharat

ಕೃಷಿ ಮಸೂದೆಗೆ ತೀವ್ರ ವಿರೋಧ: ಎನ್​ಡಿಎ ಮೈತ್ರಿಕೂಟದಿಂದ ಹೊರಬಂದ ಶಿರೋಮಣಿ ಅಕಾಲಿ ದಳ

ಕೃಷಿ ಮಸೂದೆಗಳ ಅಂಗೀಕಾರಕ್ಕೆ ಸಂಬಂಧಿಸಿ ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಸುಖ್‌ಬೀರ್ ಸಿಂಗ್ ಬಾದಲ್ ನೇತೃತ್ವದ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರನ್ನ ಈಗಾಗಲೇ ಭೇಟಿಯಾಗಿದ್ದು, ಇದೀಗ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದಿಂದ ಹೊರಬರುತ್ತಿರುವುದಾಗಿ ಹೇಳಿಕೊಂಡಿದೆ.

author img

By

Published : Sep 26, 2020, 10:54 PM IST

Updated : Sep 26, 2020, 11:03 PM IST

SAD quits NDA over farm bills
SAD quits NDA over farm bills

ಪಂಜಾಬ್​: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕೃಷಿ ವಿಧೇಯಕ್ಕೆ ವಿರೋಧ ವ್ಯಕ್ತಪಡಿಸಿರುವ ಶಿರೋಮಣಿ ಅಕಾಲಿ ದಳ ಇದೀಗ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದಿಂದ ಹೊರಗುಳಿಯಲು ನಿರ್ಧರಿಸಿದೆ.

ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಈಗಾಗಲೇ ಶಿರೋಮಣಿ ಅಕಾಲಿ ದಳದ ಸದಸ್ಯೆ ಹರ್ಸಿಮತ್​​ ಕೌರ್​ ಬಾದಲ್​​ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮೈತ್ರಿಕೂಟದಿಂದ ಹೊರಬರಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

  • Shiromani Akali Dal (SAD) has decided to pull out of BJP-led NDA alliance because of the centre’s stubborn refusal to give statutory legislative guarantees to protect assured marketing of farmers crops on MSP & its continued insensitivity to Punjabi & Sikh issues: SAD pic.twitter.com/lC3xHczDm2

    — ANI (@ANI) September 26, 2020 " class="align-text-top noRightClick twitterSection" data=" ">

ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್​ ಸಿಂಗ್​ ಬಾದಲ್​​, ಬಿಜೆಪಿ ಸರ್ಕಾರದ ಈ ಮೂರು ಕೃಷಿ ಮಸೂದೆಗಳಿಗೆ ನಮ್ಮ ಪಕ್ಷದಿಂದ ವಿರೋಧವಿದೆ. ಪಂಜಾಬ್​ ರೈತರು ದುರ್ಬಲರು ಎಂದು ನೀವೂ ಭಾವಿಸಬೇಡಿ ಎಂಬ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದಾರೆ. ಜತೆಗೆ ರಾಷ್ಟ್ರಪತಿಗಳು ಈ ಬಿಲ್​ಗೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದ್ದಾರೆ.

ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿ ಈಗಾಗಲೇ ಪಂಜಾಬ್​, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪಂಜಾಬ್​ನಲ್ಲಿ ಅನೇಕ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ 2020, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ ಮಸೂದೆ 2020 ಸೇರಿದಂತೆ ಮೂರು ಮಸೂದೆ ಜಾರಿಗೊಳಿಸಲು ಮುಂದಾಗಿದೆ.

Last Updated : Sep 26, 2020, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.