ETV Bharat / bharat

ಕೇಂದ್ರ ಸಚಿವ ಸಂಪುಟಕ್ಕೆ ಶಿವಸೇನೆ ಸಂಸದ ಸಾವಂತ್ ರಾಜೀನಾಮೆ: ಮುರಿದು ಬಿತ್ತಾ ಮೈತ್ರಿ? - ಶಿವಸೇನೆ ಸಂಸದ ಅರವಿಂದ ಸಾವಂತ್ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಕೇಂದ್ರ ಸಚಿವರೂ ಆಗಿರುವ ಶಿವಸೇನೆ ಸಂಸದ ಅರವಿಂದ ಸಾವಂತ್ ಪ್ರಕಟಿಸಿದ್ದಾರೆ.

ಅರವಿಂದ ಸಾವಂತ್ ರಾಜೀನಾಮೆ
author img

By

Published : Nov 11, 2019, 10:16 AM IST

ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಕೇಂದ್ರ ಸಚಿವ ಅರವಿಂದ ಸಾವಂತ್ ಪ್ರಕಟಿಸಿದ್ದಾರೆ.

‘ಶಿವಸೇನೆ ಸತ್ಯದ ಬದಿಯಲ್ಲಿದೆ. ಅಂತಹ ವಾತಾವರಣದಲ್ಲಿ ನಾನು ಕೇಂದ್ರ ಸರ್ಕಾರದಲ್ಲಿ ಯಾಕೆ ಇರಬೇಕು? ನಾನು ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕಾಗಿ ಇಂದು ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಟಿ ನಡೆಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

  • शिवसेनेची बाजू सत्याची आहे. अशा खोट्या वातावरणात दिल्लीतील सरकार मध्ये तरी का रहायचे?
    आणि म्हणूनच मी केंद्रीय मंत्री पदाचा राजीनामा देत आहे. या संदर्भात आज सकाळी ११.०० वा. दिल्ली येथे मी पत्रकार परिषद (Press Conference) घेणार आहे.

    — Arvind Sawant (@AGSawant) November 11, 2019 " class="align-text-top noRightClick twitterSection" data=" ">

2019 ರ ಲೋಕಸಭಾ ಚುನಾವಣೆಯ ನಂತರ ಸಾವಂತ್ ಕೇಂದ್ರ ಸರ್ಕಾರದ ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಕೈಗಾರಿಕಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಮಧ್ಯೆ ಅವರ ರಾಜೀನಾಮೆ ವಿಷಯ ಕುತುಹೂಲ ಕೆರಳಿಸಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಶಿವಸೇನೆ ಜೊತೆಗೂಡಿ ಸರ್ಕಾರ ರಚಿಸುವುದಾಗಿ ಬಿಜೆಪಿ ಸ್ಪಷ್ಟಪಡಿಸಿದೆ. ಆದ್ರೆ ಶಿವಸೇನೆ ಮುಖ್ಯಮಂತ್ರಿ ಹುದ್ದೆಯನ್ನು ಕೇಳಿದೆ, ಇದನ್ನು ಮಹಾರಾಷ್ಟ್ರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ತಿರಸ್ಕರಿಸಿದೆ. 288 ಸದಸ್ಯ ಬಲವಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 105 ಮತ್ತು ಶಿವಸೇನೆ 56 ಸ್ಥಾನಗಳನ್ನು ಗೆದ್ದಿವೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶಿವಸೇನೆಗೆ ಬೆಂಬಲ ನೀಡುವ ಬಗ್ಗೆ ಸುಳಿವು ನೀಡಿದೆ. ನಂತರ ಪಕ್ಷವು ತನ್ನ ಮಿತ್ರ ಪಕ್ಷವಾದ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲು ಮುಂದಾಗಿದೆ. ಈಗ ಅರವಿಂದ್​ ಸಾವಂತ್​ ರಾಜೀನಾಮೆ ನೀಡುವ ಕುರಿತು ಪ್ರಕಟಿಸಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ.

Intro:Body:

for chetana 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.