ನವದೆಹಲಿ: ದೇಶದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ದೆಹಲಿಯ ವಿವಿಧ ಆಸ್ಪತ್ರೆಗಳ ತೀವ್ರ ನಿಗಾ ಘಟಕದಲ್ಲಿ ಹಾಸಿಗೆಗಳ ಕೊರತೆ ಎದುರಾಗಿದೆ. ಈ ಸಮಸ್ಯೆಗೆ ಇತರ ರಾಜ್ಯಗಳಿಂದ ವಲಸೆ ಬಂದವರು ಕಾರಣ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆರೋಪಿಸಿದ್ದಾರೆ.
"ಕೊರೊನಾಗೆ ಚಿಕಿತ್ಸೆ ಪಡೆಯಲು ದೆಹಲಿಗೆ ಬರುವವರು ಈಗಾಗಲೇ ಇಲ್ಲಿನ ದೊಡ್ಡ ಆಸ್ಪತ್ರೆಗಳಲ್ಲಿ ಹಾಸಿಗೆಯನ್ನು ಕಾಯ್ದಿರಿಸಿದ್ದಾರೆ. ಕೆಲವರು ಬೇರೆ ಬೇರೆ ಆಸ್ಪತ್ರೆಗೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸಿಗೆಗಳ ಕೊರತೆ ಎದುರಾಗಿದೆ" ಎಂದು ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿ ಅವರು, "ಇದುವರೆಗೂ ದೆಹಲಿ ಮೂಲದವರಲ್ಲದ ಸುಮಾರು 1500 ಜನರನ್ನು ರಾಜಧಾನಿಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಇನ್ನು ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 1000 ಹಾಸಿಗೆಗಳು ಲಭ್ಯವಿವೆ. ಹೊಸ ಹಾಸಿಗೆಗಳನ್ನು ಸೇರಿಸಲಾಗಿದೆ. ಆದರೆ ಆಸ್ಪತ್ರೆಯ ಅಪ್ಲಿಕೇಶನ್‌ಗಳ ಮೂಲಕ ಜನರು ಕರೆ ಮಾಡಿ ಹಾಸಿಗೆಯನ್ನು ಕಾಯ್ದಿರಿಸುತ್ತಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಅಗತ್ಯವಿರುವ ರೋಗಿಗಳಿಗೆ ಮಾತ್ರ ಹಾಸಿಗೆಗಳನ್ನು ನೀಡುತ್ತಿದ್ದಾರೆ ಎಂದರು.