ಮುಂಬೈ : ಡ್ರಗ್ಸ್ ಲಿಂಕ್ ಕೇಸ್ ಸಂಬಂಧ ತನಿಖೆ ಎದುರಿಸುತ್ತಿರುವ ನಟಿ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಇದೀಗ ರಿಯಾ ಸಹೋದರ ಶೋಯಿಕ್ ಚಕ್ರವರ್ತಿ ಹೊಸ ಜಾಮೀನು ಅರ್ಜಿ ಸಲ್ಲಿಸಿದ್ದಾನೆ.
ಮುಂಬೈನ ಎನ್ಡಿಪಿಎಸ್ ನ್ಯಾಯಾಲಯದಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮೊದಲು ನಟಿ ರಿಯಾ ಚಕ್ರವರ್ತಿ ಮತ್ತು ಸಹೋದರ ಶೋಯಿಕ್ ಚಕ್ರವರ್ತಿ ಅವರ ಜಾಮೀನು ಅರ್ಜಿ ವಿರೋಧಿಸಿದ ಎನ್‌ಸಿಬಿ, ಅವರಿಬ್ಬರೂ ಉನ್ನತ ಸಮಾಜದ ವ್ಯಕ್ತಿಗಳು ಮತ್ತು ಡ್ರಗ್ಸ್ ಪೂರೈಕೆದಾರರೊಂದಿಗೆ ಸಂಪರ್ಕ ಹೊಂದಿದ್ದ ಡ್ರಗ್ಸ್ ಸಿಂಡಿಕೇಟ್‌ನ ಸಕ್ರಿಯ ಸದಸ್ಯರಾಗಿದ್ದಾರೆ ಎಂದು ತಿಳಿಸಿತ್ತು.
ಬಳಿಕ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು ನೀಡಿ ಸಹೋದರ ಶೋಯಿಕ್ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.