ಚೆನ್ನೈ: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೆಂಟಿಲೇಟರ್ ಹಾಗೂ ಎಕ್ಮೋ ಮಷಿನ್ನಲ್ಲೇ ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ಅವರ ಆರೋಗ್ಯದ ಬಗ್ಗೆ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ ಇದೀಗ ಹೆಲ್ತ್ ಬುಲೆಟಿನ್ ಪ್ರಕಟ ಮಾಡಿdಎ. ಎಸ್ಪಿಬಿ ಅವರ ಆರೋಗ್ಯ ಸ್ಥಿರವಾಗಿದ್ದು, ಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದೆ.
ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್ಪಿಬಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಆಗಸ್ಟ್ 13ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ವೆಂಟಿಲೇಟರ್ ಹಾಗೂ ಎಕ್ಮೋ ಮಷಿನ್ನಲ್ಲಿದ್ದಾರೆ. ಆಸ್ಪತ್ರೆಯ ನುರಿತ ಸಿಬ್ಬಂದಿ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದು, ಯುಎಸ್ ಹಾಗೂ ಯುಕೆ ವೈದ್ಯರಿಂದಲೂ ಸೂಕ್ತ ಮಾಹಿತಿ ಪಡೆದುಕೊಂಡು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಈ ಹಿಂದೆ ಮಾಹಿತಿ ನೀಡಿತು.