ನವದೆಹಲಿ: ಭಾರತದಲ್ಲಿ ಕಿಲ್ಲರ್ ಕೊರೊನಾಗೆ ಬಲಿಯಾದವರ ಸಂಖ್ಯೆ 42 ಸಾವಿರ ಗಡಿ ದಾಟಿದೆ. 20 ಲಕ್ಷ ಕೇಸ್ಗಳ ಪೈಕಿ 14 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಎಂಬುದು ಸಮಾಧಾನಕರ ವಿಚಾರವಾಗಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 61,537 ಸೋಂಕಿತರು ಪತ್ತೆಯಾಗಿದ್ದು, 933 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,88,612ಕ್ಕೆ ಹಾಗೂ ಮೃತರ ಸಂಖ್ಯೆ 42,518ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 14,27,006 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 6,19,088 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 7ರ ವರೆಗೆ 2,33,87,171(2.33ಕೋಟಿ) ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 5,98,778 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.