ETV Bharat / bharat

ಭಾರತದಲ್ಲಿ ಒಂದೇ ದಿನ 95 ಸಾವಿರ ಜನರಿಗೆ ಅಂಟಿದ ವೈರಸ್​... ಮೃತರ ಸಂಖ್ಯೆ 75 ಸಾವಿರಕ್ಕೆ ಏರಿಕೆ - ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಭಾರತದಲ್ಲಿ ಕೋವಿಡ್​​ ಸೋಂಕಿತರ ಸಂಖ್ಯೆ 44,65,864 ಹಾಗೂ ಮೃತರ ಸಂಖ್ಯೆ 75,062ಕ್ಕೆ ಏರಿಕೆಯಾಗಿದೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​
author img

By

Published : Sep 10, 2020, 10:19 AM IST

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 44 ಲಕ್ಷದ ಗಡಿ ದಾಟಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 75 ಸಾವಿರಕ್ಕೆ ಏರಿಕೆಯಾಗಿದೆ. 34 ಲಕ್ಷಕ್ಕೂ ಅಧಿಕ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಕೇಸ್​ಗಳು ಎಂಬಂತೆ ದೇಶದಲ್ಲಿ ಬರೋಬ್ಬರಿ 95,735 ಸೋಂಕಿತರು ಪತ್ತೆಯಾಗಿದ್ದು, 1,172 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 44,65,864 ಹಾಗೂ ಮೃತರ ಸಂಖ್ಯೆ 75,062ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 34,71,784 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 9,19,018 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಸೆಪ್ಟೆಂಬರ್ 9ರ ವರೆಗೆ 5,29,34,433 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,29,756 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.