ಇಂದೋರ್(ಮಧ್ಯಪ್ರದೇಶ): ನಗರದಲ್ಲಿ ಭಾನುವಾರ ಆರು ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,069 ಕ್ಕೆ ತಲುಪಿದೆ ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಕಚೇರಿ ತಿಳಿಸಿದೆ.
ಭಾನುವಾರ 1,058 ಸ್ಯಾಂಪಲ್ಸ್ನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 1,006 ಜನರ ವರದಿ ನೆಗೆಟಿವ್ ಬಂದಿದೆ. ನಾಲ್ವರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 174 ಆಗಿದೆ.
ದೇಶದಲ್ಲಿ ಭಾನುವಾರ ಅತಿ ಹೆಚ್ಚು 11,929 ಹೊಸ ಪ್ರಕರಣಗಳನ್ನು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,20,922 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.