ETV Bharat / bharat

ಸಿಡಿಲು ಬಡಿದು ಒಂದೇ ಕುಟುಂಬದ ಆರು ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ! - ಮಿಂಚು ಹೊಡೆದು ಆರು ಮಂದಿ ಸಾವು

ಸಿಡಿಲು ಬಡಿದು ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ.

Madhya Pradesh
Madhya Pradesh
author img

By

Published : Sep 10, 2020, 10:46 PM IST

Updated : Sep 11, 2020, 6:36 AM IST

ಬರ್ವಾನಿ (ಮಧ್ಯ ಪ್ರದೇಶ): ಸಿಡಿಲು ಬಡಿದ ಪರಿಣಾಮ ಅಪ್ರಾಪ್ತೆ ಸೇರಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬರ್ವಾನಿಯಲ್ಲಿ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ್ದ ಮನೆಗೆ ಸಿಡಿಲು ಅಪ್ಪಳಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ವರ್ಲಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಳೆಗಾಲದ ಕಾರಣಕ್ಕಾಗಿ ತಾತ್ಕಾಲಿಕ ಮನೆಯಲ್ಲಿ ಇವರು ಆಶ್ರಯ ಪಡೆದುಕೊಂಡಿದ್ದರು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮೃತರನ್ನ ಶಾಂತಾಬಾಯಿ (35), ಲೀಲಾ ಬಾಯಿ (25), ನೀರಾಬಾಯಿ (23), ಆಜಾದ್ ​(5) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Last Updated : Sep 11, 2020, 6:36 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.