ETV Bharat / bharat

ಪಾಕ್​ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಯೋಧ ಹುತಾತ್ಮ - ಜಮ್ಮು ಮತ್ತು ಕಾಶ್ಮೀರದ ಪೂಂಚ್

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್​ ಪಡೆಯಿಂದ ಮತ್ತೆ ಮತ್ತೆ ಕ್ಯಾತೆ ಮುಂದುವರೆದಿದೆ. ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಒಬ್ಬ ಭಾರತೀಯ ಯೋಧ ಹುತಾತ್ಮನಾಗಿದ್ದಾನೆ.

Pakistan violates ceasefire
ಪಾಕ್​ನಿಂದ ಕದನ ವಿರಾಮ ಉಲ್ಲಂಘನೆ
author img

By

Published : Aug 1, 2020, 10:43 AM IST

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಬಾಲಾಕೋಟ್​ ಸೆಕ್ಟರ್‌ನಲ್ಲಿ ಪಾಕಿಸ್ತಾನ ಪಡೆ ಕದನ ವಿರಾಮ ಉಲ್ಲಂಘಿಸಿದೆ. ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದಾನೆ.

ಮೂರು ದಿನಗಳ ಹಿಂದೆ ಕೂಡ ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್​ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ, ಓರ್ವ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಇದಕ್ಕೆ ನಮ್ಮ ಸೇನೆ ಪ್ರತ್ಯುತ್ತರ ನೀಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರಾ, ಪೂಂಚ್ ಹಾಗೂ ರಾಜೌರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇತ್ತೀಚೆಗೆ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿ ಪಾಕ್​ ಪಡೆ ನಿರಂತರ ಗುಂಡಿನ ದಾಳಿ ಮುಂದುವರಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.